ಬೆಂಗಳೂರು:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನೆರವೇರಿಸಲಾದ ಭೂಮಿ ಪೂಜೆಯ ಪ್ರಸಾದವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಲುಪಿಸಲಾಯಿತು.
ಅಯೋಧ್ಯೆ ಭೂಮಿ ಪೂಜೆ ಪ್ರಸಾದ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಭಾರತೀಯ ಜನತಾ ಪಾರ್ಟಿಯ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿ, ಅಯೋಧ್ಯೆಯ ಭೂಮಿ ಪೂಜೆಯ ಪ್ರಸಾದವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಭಾರತೀಯ ಜನತಾ ಪಾರ್ಟಿಯ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿ, ಅಯೋಧ್ಯೆಯ ಭೂಮಿ ಪೂಜೆಯ ಪ್ರಸಾದವನ್ನು ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಕೊರೊನಾ ಹಿನ್ನಲೆ, ಅಯೋಧ್ಯೆಯಲ್ಲಿ ಸರಳವಾಗಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಕನಿಷ್ಠ ಅತಿಥಿಗಳಿಗೆ ಮಾತ್ರ ಆಹ್ವಾನ ನೀಡಿ, ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಸೇರಿ ಪ್ರಮುಖರಿಗೆ ವರ್ಚುವಲ್ ಮೂಲಕ ಸಮಾರಂಭದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿತ್ತು.
ಅಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಭಾಗಿಯಾಗಲು ಸಾಧ್ಯವಾಗದೇ ಇದ್ದರೂ, ಆಸ್ಪತ್ರೆಯಲ್ಲಿ ನೇರಪ್ರಸಾರ ವೀಕ್ಷಣೆ ಮಾಡಿದ್ದರು. ಇಂದು ಅವರಿಗೆ ಭೂಮಿ ಪೂಜೆ ಪ್ರಸಾದವನ್ನು ತಲುಪಿಸಲಾಯಿತು.