ಕರ್ನಾಟಕ

karnataka

ETV Bharat / city

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ - ಬೆಂಗಳೂರು ರಾಜಕಾಲುವೆ

ದ್ವಿಚಕ್ರ ವಾಹನವೊಂದು ರಾಜಕಾಲುವೆಗೆ ಬೀಳುತ್ತಿದ್ದುದನ್ನು ತಪ್ಪಿಸಲು ಹೋದ ಯುವಕನೊಬ್ಬ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ.

ಯುವಕನ ಶವ ಪತ್ತೆ
ಯುವಕನ ಶವ ಪತ್ತೆ

By

Published : Jun 19, 2022, 10:31 AM IST

Updated : Jun 19, 2022, 5:28 PM IST

ಬೆಂಗಳೂರು/ಕೆ.ಆರ್.ಪುರ: ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ 24 ವರ್ಷದ ಯುವಕ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ. ಇಂದು ಬೆಳಗ್ಗೆ ಆತನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿವಮೊಗ್ಗದ ಮಿಥುನ್‌ ಎಂದು ಗುರುತಿಸಲಾಗಿದೆ.

ಗಾಯತ್ರಿ ಬಡಾವಣೆಯ ಎಸ್‌ಆರ್‌ ಲೇಔಟ್‌ ಬಳಿ ದ್ವಿಚಕ್ರ ವಾಹನವೊಂದು ರಾಜಕಾಲುವೆಗೆ ಬೀಳುತ್ತಿತ್ತು. ಇದನ್ನು ತಪ್ಪಿಸಲು ಹೋಗಿ ಮಿಥುನ್‌ ನೀರಿನಲ್ಲಿ ಕೊಚ್ಚಿಹೋಗಿದ್ದ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎನ್​ಡಿಆರ್‌ಎಫ್‌ ಸಿಬ್ಬಂದಿ ಸತತ 48 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ

ನಿನ್ನೆ ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸರು ಸೇರಿ 30ಕ್ಕೂ ಹೆಚ್ಚು ಸಿಬ್ಬಂದಿ ನಾಲ್ಕು ತಂಡಗಳಾಗಿ ಸೀಗೆಹಳ್ಳಿ ಕೆರೆ ಮತ್ತು ರಾಜಕಾಲುವೆ ಸುತ್ತಮುತ್ತ ಸುಮಾರು ಐದಾರು ಗಂಟೆಗಳ ಶೋಧ ನಡೆಸಿದ್ದರು. ಇಂದು ಬೆಳಗ್ಗೆ ಮತ್ತೆ ಶೋಧ ಕಾರ್ಯಾರಂಭಿಸಿದಾಗ ಯುವಕ ಕೊಚ್ಚಿಕೊಂಡು ಹೋದ ಸ್ಥಳದಿಂದ ಸುಮಾರು 1 ಕಿ.ಮೀ ದೂರದಲ್ಲಿ ಶವ ದೊರೆತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟರ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನಿಗಾಗಿ ಕಾಯುತ್ತಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ:ಮಳೆಗೆ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಕಾರಂಜಿ ಕೆರೆಯಲ್ಲಿ ಪತ್ತೆ

Last Updated : Jun 19, 2022, 5:28 PM IST

ABOUT THE AUTHOR

...view details