ಕರ್ನಾಟಕ

karnataka

ETV Bharat / city

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ - ಯುವತಿ ಆತ್ಮಹತ್ಯೆ ಪ್ರಕರಣ

ಬೆಂಗಳೂರಿನ ಗೋವಿಂದರಾಜ ನಗರದಲ್ಲಿರುವ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

bengaluru
ಸಾಂದರ್ಭಿಕ ಚಿತ್ರ

By

Published : May 30, 2022, 8:38 AM IST

ಬೆಂಗಳೂರು:ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪವಿತ್ರಾ (23) ಆತ್ಮಹತ್ಯೆಗೆ ಶರಣಾದ ಯುವತಿ.

ನಗರದ ಸಂಸ್ಥೆಯೊಂದರಲ್ಲಿ ತರಬೇತಿ ಪಡೆಯಲು ಕೆಲ ತಿಂಗಳ ಹಿಂದೆ ಈಕೆ ಬೆಂಗಳೂರಿಗೆ ಬಂದಿದ್ದು, ಗೋವಿಂದರಾಜ ನಗರದಲ್ಲಿರುವ ಪೇಯಿಂಗ್ ಗೆಸ್ಟ್(ಪಿಜಿ)ಯಲ್ಲಿ ವಾಸವಿದ್ದಳು. ನಿನ್ನೆ(ಭಾನುವಾರ) ಮಧ್ಯಾಹ್ನ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾಳೆ. ಸಂಜೆ ಸ್ನೇಹಿತೆಯರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಯುವತಿಯ ಸ್ನೇಹಿತೆಯರ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಪಷ್ಟ ಮಾಹಿತಿ ಇನ್ನಷ್ಟೇ ಸಿಗಬೇಕಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಗೋವಿಂದರಾಜ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ ಏರ್ಪೋರ್ಟ್‌ ಕಾಮಗಾರಿ ವೇಳೆ ರೋಲರ್ ಹರಿದು ಕಾರ್ಮಿಕ ಸಾವು

ABOUT THE AUTHOR

...view details