ಕರ್ನಾಟಕ

karnataka

ETV Bharat / city

ಸಚಿವರಿಗೆ ಮೊಟ್ಟೆ ಪಾರ್ಸಲ್ ಮಾಡಿ ಯೂತ್ ಕಾಂಗ್ರೆಸ್ ಪ್ರತಿಭಟನೆ - 26ರ ರಂದು ಕೊಡಗಿನಲ್ಲಿ ಪ್ರತಿಭಟನೆ

ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದೆ.

ಸಚಿವರಿಗೆ ಮೊಟ್ಟೆ ಪಾರ್ಸಲ್ ಮಾಡಿ ಯೂತ್ ಕಾಂಗ್ರೆಸ್ ಪ್ರತಿಭಟನೆ
ಸಚಿವರಿಗೆ ಮೊಟ್ಟೆ ಪಾರ್ಸಲ್ ಮಾಡಿ ಯೂತ್ ಕಾಂಗ್ರೆಸ್ ಪ್ರತಿಭಟನೆ

By

Published : Aug 20, 2022, 7:52 AM IST

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ‌ ಮೇಲೆ ಮೊಟ್ಟೆ ಎಸೆತ ಖಂಡಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಬೆಂಗಳೂರಿನ ಯುದ್ಧ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಸಚಿವರಿಗೆ ಮೊಟ್ಟೆ ಬಾಕ್ಸ್ ಪಾರ್ಸಲ್ ಮಾಡುವ ಮೂಲಕ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದರು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ನಲಪಾಡ್, ನಮ್ಮ ನಾಯಕರಿಗೆ ಬಿಜೆಪಿಯವರು ಮೊಟ್ಟೆ ಹೊಡೆದಿದ್ದಾರೆ. ಅದಕ್ಕೆ ನಾವು ಅವರಿಗೆ ಮೊಟ್ಟೆ ಕಳಿಸ್ತೇವೆ. ಪಾರ್ಸಲ್ ಮೂಲಕ ಅವರಿಗೆ ಕಳಿಸ್ತಿದ್ದೇವೆ. ಆದರೆ, ನಮಗೆ ಪ್ರತಿಭಟನೆ ಮಾಡೋಕೆ ಬಿಡ್ತಿಲ್ಲ. ನಮ್ಮನ್ನ ಅರೆಸ್ಟ್ ಮಾಡ್ತಿದ್ದಾರೆ. ಅರೆಸ್ಟ್ ಮಾಡಿದ್ರೂ ನಾವು ಹೆದರಲ್ಲ. ನಮ್ಮ‌ಹೋರಾಟ ಮುಂದುವರೆಯುತ್ತದೆ ಎಂದು ಕಿಡಿಕಾರಿದರು.

ಸಚಿವರಿಗೆ ಮೊಟ್ಟೆ ಪಾರ್ಸಲ್ ಮಾಡಿ ಯೂತ್ ಕಾಂಗ್ರೆಸ್ ಪ್ರತಿಭಟನೆ

ಮೊಟ್ಟೆ ಹೊಡೆದವರನ್ನ ಬಿಟ್ಟು ಕಳಿಸ್ತಾರೆ. ನ್ಯಾಯಕ್ಕಾಗಿ ಹೋರಾಡುವ ನಮ್ಮನ್ನ ಅರೆಸ್ಟ್ ಮಾಡ್ತಾರೆ ಎಂದು ಪೊಲೀಸರ ವಿರುದ್ಧ ನಲಪಾಡ್ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಮೊಟ್ಟೆ ಎಸೆದ ಘಟನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ:ಕೊಡಗು ಜಿಲ್ಲೆಯಮಳೆ ಹಾನಿ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ತೆರಳಿದ್ದ ಮಾಜಿ ಸಿಎಂಸಿದ್ದರಾಮಯ್ಯ ಕಾರಿನ ಮೇಲೆ ಹಿಂದೂ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್​, ಕೊಡಗು, ದಾವಣಗೆರೆ, ಚಿತ್ರದುರ್ಗ, ಮೈಸೂರು ಸೇರಿದಂತೆ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆ:ಸಿದ್ದರಾಮಯ್ಯರ ಕಾರಿನ ಮೇಲೆ ಮೊಟ್ಟೆ ಎಸೆಯುವ ಮೂಲಕ ವಿಕೃತಿ ಮೆರೆದಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿತು. ಈ ವೇಳೆ, ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

26ರ ರಂದು ಕೊಡಗಿನಲ್ಲಿ ಪ್ರತಿಭಟನೆ:ಬಿಜೆಪಿಯವರು ಕಾರ್ಯಕರ್ತರನ್ನ ಬಿಟ್ಟು ಪ್ರತಿಭಟನೆ ಮಾಡಿಸುತ್ತಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? ನಾವು ಅಲ್ಲಿಂದಲೇ ಪ್ರತಿಭಟನೆ ಮಾಡಿಕೊಂಡು ಬಂದಿರೋದು.

ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ. ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ. ಇದನ್ನು ಖಂಡಿಸಿ ಆ26 ರಂದು ಕೊಡಗಿನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ರವಾನಿಸಿದ್ದಾರೆ.

ಚಿಕ್ಕಮಗಳೂರಲ್ಲೂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ: ಕೊಡಗು ನಂತರ ಶುಕ್ರವಾರ ಚಿಕ್ಕಮಗಳೂರು ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯಗೆ ಅಲ್ಲೂ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಯಿತು.

ಇನ್ನು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ, ಆರೋಪಿಗಳನ್ನು ಶುಕ್ರವಾರ ರಾತ್ರಿಯೇ ಜಾಮೀನನ ಮೇಲೆ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್​ನ ವಿ.ಪಿ.ಶಶಿಧರ್ ದೂರು ನೀಡಿದ್ದು, ರಾತ್ರಿ‌ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜಾಮೀನು ನೀಡಲಾಗಿದೆ.‌

(ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ)

ABOUT THE AUTHOR

...view details