ಬೆಂಗಳೂರು :21 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ಎನ್ಎಸ್ಯುಐ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ತೈಲ ಬೆಲೆ ಏರಿಕೆ ಖಂಡಿಸಿ ಬೀದಿಗಿಳಿದ ಯುವ ಕಾಂಗ್ರೆಸ್..
ಜಾಗತಿಕವಾಗಿ ತೈಲ ಬೆಲೆ ಕುಸಿದಿದ್ದರೂ ದೇಶದಲ್ಲಿ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು..
ಬಿಜೆಪಿಯ ಪ್ರಮುಖ ನಾಯಕರ ಭಾವಚಿತ್ರಗಳನ್ನು ದಹಿಸಿದರು. ಕೂಡಲೇ ತೈಲ ಬೆಲೆ ಇಳಿಸುವಂತೆ ಒತ್ತಾಯಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.
ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥಗೌಡ ಮಾತನಾಡಿ, ಕೊರೊನಾದಿಂದ ತತ್ತರಿಸಿರುವ ಈ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಬದಲು ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಜನರಿಗೆ ತೊಂದರೆಯಾಗಿದೆ. ನಾವು ಕಾರು, ಬೈಕುಗಳನ್ನು ಬಿಟ್ಟು ಸೈಕಲ್ ಎತ್ತಿನಗಾಡಿಯಲ್ಲಿ ಓಡಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದರು.