ಕರ್ನಾಟಕ

karnataka

ETV Bharat / city

ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ - ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ರೈತಪರ ಹೋರಾಟದಲ್ಲಿ ಶಾಸಕಿ ಸೌಮ್ಯರೆಡ್ಡಿ ಜೊತೆ ಕೆಲವು ಮಹಿಳಾ ಪೊಲೀಸ್ ಪೇದೆಗಳು ಹಾಗೂ ಪೊಲೀಸ್ ಸಿಬ್ಬಂದಿ ಅತ್ಯಂತ ಕೆಟ್ಟ ರೀತಿಯಲ್ಲಿ ವರ್ತಿಸಿ ಅವರನ್ನು ನೆಲಕ್ಕೆ ತಳ್ಳಿ ಎಳೆದಾಡಿ ಅವಮಾನಿಸಿರುವ ವಿಡಿಯೋ ಚಿತ್ರಗಳು ಲಭ್ಯವಿದ್ದರೂ, ಅದನ್ನು ಮರೆಮಾಚಲು ಹೋರಾಟ ನಡೆದ 2 ದಿನಗಳ ನಂತರ ಎಫ್ಐಆರ್ ದಾಖಲಿಸಿರುವುದು ಬಿಜೆಪಿಯ ರಾಜಕೀಯ ಬಣ್ಣ ಬಹಿರಂಗವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

youth-congress-protests-against-fir-filed-against-mla-soumya-reddy
ಯುವ ಕಾಂಗ್ರೆಸ್ ಪ್ರತಿಭಟನೆ

By

Published : Jan 23, 2021, 10:11 PM IST

ಬೆಂಗಳೂರು: ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಬಿಜೆಪಿ ಸರ್ಕಾರ ಸುಳ್ಳು ದೂರು ದಾಖಲಿಸಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ರೇಸ್ ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಿಜೆಪಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ನ್ಯಾಯಯುತ ಹೋರಾಟಗಾರರನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಆಧಾರ ರಹಿತ ಎಫ್​ಐಆರ್ ದಾಖಲಿಸುವ ಮೂಲಕ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.

ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಹಗರಣ ನಡೆಸಿ ನ್ಯಾಯಾಲಯದಿಂದ ನಿಂದನೆಗೆ ಒಳಗಾಗಿ ತನಿಖೆ ಎದುರಿಸುತ್ತಿರುವವರ ವಿರುದ್ಧ ಎಫ್​ಐಆರ್ ದಾಖಲಿಸುವುದಿಲ್ಲ. ರೈತ ಮಹಿಳೆಯರು ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ದೌರ್ಜನ್ಯದಿಂದ ವರ್ತಿಸಿರುವ ಬಿಜೆಪಿ ಶಾಸಕರು ಹಾಗೂ ಸಂಸದರ ವಿರುದ್ಧವೂ ಎಫ್ಐಆರ್ ದಾಖಲಿಸಿಲ್ಲ. ರೈತಪರ ಹೋರಾಟ ನಡೆಸುವವರ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸುವ ಮೂಲಕ ಅತ್ಯಂತ ಕೀಳುಮಟ್ಟದ ರಾಜಕೀಯವನ್ನು ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓದಿ-ತೃತೀಯ ಲಿಂಗಿಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಗೃಹ ಸಚಿವಾಲಯ ನಿರ್ದೇಶನ

ರೈತಪರ ಹೋರಾಟದಲ್ಲಿ ಶಾಸಕಿ ಸೌಮ್ಯರೆಡ್ಡಿ ಜೊತೆ ಕೆಲವು ಮಹಿಳಾ ಪೊಲೀಸ್ ಪೇದೆ ಹಾಗೂ ಪೊಲೀಸ್ ಸಿಬ್ಬಂದಿ ಅತ್ಯಂತ ಕೆಟ್ಟ ರೀತಿಯಲ್ಲಿ ವರ್ತಿಸಿ ಅವರನ್ನು ನೆಲಕ್ಕೆ ತಳ್ಳಿ ಎಳೆದಾಡಿ ಅವಮಾನಿಸಿರುವ ವಿಡಿಯೋ ಚಿತ್ರಗಳು ಲಭ್ಯವಿದ್ದರೂ, ಅದನ್ನು ಮರೆಮಾಚಲು ಹೋರಾಟ ನಡೆದ 2 ದಿನಗಳ ನಂತರ ಎಫ್ಐಆರ್ ದಾಖಲಿಸಿರುವುದು ಬಿಜೆಪಿಯ ರಾಜಕೀಯ ಬಣ್ಣ ಬಹಿರಂಗವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ಮನೋಹರ್, ಸುಳ್ಳು ಎಫ್ಐಆರ್ ದಾಖಲಿಸಿರುವುದನ್ನು ಕೂಡಲೇ ಇಲಾಖೆ ರದ್ದುಗೊಳಿಸಬೇಕು ಹಾಗೂ ಈ ವಿಷಯದಲ್ಲಿ ತನಿಖೆ ನಡೆಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರು, ಸಂಸದರು, ಶಾಸಕರು, ಬಿಜೆಪಿ ಮುಖಂಡರು ನಡೆಸಿರುವ ದೌರ್ಜನ್ಯದ ವಿರುದ್ಧ ಕೂಡಲೇ ಎಫ್​ಐಆರ್ ದಾಖಲಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇವೆ ಎಂದರು.

ABOUT THE AUTHOR

...view details