ಬೆಂಗಳೂರ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನಾಯಕರು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಗೆ 40% ಭ್ರಷ್ಟ ಬಿಜೆಪಿ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಹಾಗೂ ಸಚಿವರು ಸ್ವಾಗತ ಕೋರುತ್ತಿರುವುದು ವಿಪರ್ಯಾಸ. ಭ್ರಷ್ಟಾಚಾರದ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮೋದಿ ಹೇಳಿಕೆ ಸುಳ್ಳಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಭ್ರಷ್ಟಾಚಾರ ಮಾಡಿರುವ ಸರ್ಕಾರದ ಸ್ವಾಗತಕ್ಕೆ ಮೋದಿ ತಲೆಬಾಗಿರುವುದು ಭ್ರಷ್ಟಾಚಾರದಲ್ಲಿ ಅವರ ಪಾಲು ಕೂಡಾ ಇರುವುದು ಸಾಬೀತಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಲಾಯಿತು.