ಬೆಂಗಳೂರು:ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿ ಸೋಮವಾರ ಪ್ರಮುಖವಾಗಿ ಚಟುವಟಿಕೆ ಕೇಂದ್ರವಾಗಿ ಗೋಚರಿಸಿತು. ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು,ಶಾಸಕ ಸೋಮಶೇಖರ್ ರೆಡ್ಡಿಗೆ ಮಾನ ಮರ್ಯಾದೆ ಇದ್ಯಾ ಎಂದು ಪ್ರಶ್ನಿಸಿದರು ಹೇಳಿಕೆ ಕೊಟ್ಟು ನಂತರ ನಾನು ಹಾಗೆ ಹೇಳಿಲ್ಲ ಅನ್ನುತ್ತಾನೆ. ಡಿಜಿಗೆ ದೂರು ಕೊಟ್ಟಿದ್ದೇವೆ. ಅವನ ವಿರುದ್ಧ ದೂರು ದಾಖಲಿಸಿಕೊಂಡು ಇನ್ನೂ ಬಂಧಿಸಿಲ್ಲ ಅಂದರೆ ಅವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡುತ್ತೇನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.