ದಾವಣಗೆರೆ:ಜಿಲ್ಲೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಇಂದಿನಿಂದ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿದ್ದು, ಜನರು ಸಹಕರಿಸುವಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.
ಬುಧವಾರ ತಾಲೂಕುಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಾಸಕ ರೇಣುಕಾಚಾರ್ಯ ಹಾಗೂ ತಹಶೀಲ್ದಾರ್ ಬಸನಗೌಡ ಪ್ರತೀ ಗುರುವಾರ, ಶುಕ್ರವಾರ, ಶನಿವಾರ ಸಂಪೂರ್ಣ ಲಾಕ್ಡೌನ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.