ದಾವಣಗೆರೆ: ಎಂಟು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರನ್ನು ದಾವಣಗೆರೆ ಪೊಲೀಸರು ಬಂಧಿಸಿ, ಆರೋಪಿಗಳಿಂದ 123 ಗ್ರಾಂ ಬಂಗಾರವನ್ನು ವಶಕ್ಕೆ ಪಡೆದಿದ್ದಾರೆ. ಸೈಯ್ಯದ್ ಮುಬಾರಕ್ ಹಾಗೂ ನದೀಮ್ ಬಂಧಿತ ಆರೋಪಿಗಳು. ಬಂಧಿತರಿಂದ ಚಿನ್ನದ ಸರ ಹಾಗೂ ದ್ವಿಚಕ್ರವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಾಯುವಿಹಾರಕ್ಕೆ ತೆರಳಿದಾಗ ಚಿನ್ನ ಎಗರಿಸಿದ್ದ ಖದೀಮರು:ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣ್ಣಿಗೆರೆ ಗ್ರಾಮದಲ್ಲಿ ವಾಯುವಿಹಾರಕ್ಕೆಂದು ಭಾಗ್ಯ ಹನುಮಂತಪ್ಪ ಎಂಬ ಮಹಿಳೆಯೊಬ್ಬರು ತೆರಳಿದಾಗ ಖದೀಮರು ಮಾಂಗಲ್ಯಸರವನ್ನು ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಭಾಗ್ಯ ಹನುಮಂತಪ್ಪ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.