ದಾವಣಗೆರೆ :ಇಲ್ಲಿನ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಗೆ ಬಂದಿದ್ದ ಅಸ್ತಮಾ ರೋಗಿಯೊಬ್ಬರಿಗೆ ತುರ್ತು ಚಿಕಿತ್ಸೆ ದೊರಕದೇ ಸಾವನ್ನಪ್ಪಿದ್ದು, ಅವರ ಕುಟುಂಬಸ್ಥರು ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ಕಿಡಿಕಾರಿದ್ದಾರೆ.
ಚಿಗಟೇರಿ ಜಿಲ್ಲಾಸ್ಪತ್ರೆ ಚಿತ್ರದುರ್ಗ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಯ ಜನರ ಸಂಜೀವಿನಿಯಾಗಿದೆ. ಸಾಕಷ್ಟು ಬೇಡಿಕೆ ಇರುವ ಈ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮರೀಚಿಕೆಯಾಗುತ್ತಿದೆ. ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ, ಬಡವರು ಬಂದರೆ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡುತ್ತಾರೆ ಎಂಬುವ ಗಂಭೀರ ಆರೋಪ ಆಸ್ಪತ್ರೆ ಮೇಲಿದೆ. ಆಸ್ಪತ್ರೆಯ ಸಮಸ್ಯೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ ಎಂಬುದು ಜನರ ದೂರು.
ಆದದ್ದೇನು? :ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಾವಣಗೆರೆಯ ಶಂಕರಮಠದ ನಿವಾಸಿ ಹನುಮಂತರಾವ್ ಎಂಬುವರನ್ನು ಆತನ ಮಗ ಅಜಯ್ ಕುಮಾರ್ ಆ್ಯಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಿದ್ದಾರೆ. ಆದರೆ, ಹೆಚ್ಚಿನ ವೆಚ್ಚವಾದ ಕಾರಣ ಕೂಡಲೇ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ.