ಕರ್ನಾಟಕ

karnataka

ದಾವಣಗೆರೆ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ!

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಮಹೇಶ್ವರಪ್ಪ ಎಂಬುವವರ ಮನೆ, ಕಚೇರಿಗಳು ಸೇರಿ ಏಕಕಾಲಕ್ಕೆ ಮೂರು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

By

Published : Mar 16, 2022, 11:37 AM IST

Published : Mar 16, 2022, 11:37 AM IST

acb raid in davanagere
ಮಹೇಶ್ವರಪ್ಪ ಮನೆ ಮೇಲೆ ಎಸಿಬಿ ದಾಳಿ

ದಾವಣಗೆರೆ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಪರಿಶೀಲನೆ ಮುಂದುವರಿದಿದೆ. ದಾವಣಗೆರೆಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಮಹೇಶ್ವರಪ್ಪ ಎಂಬುವವರ ಮನೆ, ಕಚೇರಿಗಳು ಸೇರಿ ಏಕಕಾಲಕ್ಕೆ ಮೂರು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

20 ಅಧಿಕಾರಿಗಳ 3 ತಂಡದಿಂದ‌‌ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ದಾವಣಗೆರೆ ನಗರದ ದೇವರಾಜ್ ಅರಸು ಬಡಾವಣೆಯಲ್ಲಿರುವ ಕಚೇರಿ, ವಿದ್ಯಾನಗರದ ರಂಗನಾಥ್ ಬಡಾವಣೆಯಲ್ಲಿರುವ ಮನೆ ಹಾಗು ಚನ್ನಗಿರಿ ತಾಲೂಕಿನ ಕಮ್ಮ ಸಾಗರ ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಾವಣಗೆರೆಯಲ್ಲಿ 10 ಮನೆ, 2 ಸೈಟ್, ಕಮ್ಮಸಾಗರದಲ್ಲಿ 10 ಎಕರೆ ಜಮೀನು, 1 ಕಾರು, 1 ಬೈಕ್ ಪತ್ತೆಯಾಗಿದೆ. ಅಧಿಕಾರಿಗಳು‌ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:ಮೈಸೂರು: ಇನ್ಸ್​​​ಪೆಕ್ಟರ್​​​ ಬಾಲಕೃಷ್ಣ ಮನೆ ಮೇಲೆಯೂ ಎಸಿಬಿ ದಾಳಿ!

ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಎಸಿಬಿ ಅಧಿಕಾರಿಗಳು ಜಂಟಿಯಾಗಿ, ಎಸಿಬಿ ಎಸ್​ಪಿ ಜಯಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ABOUT THE AUTHOR

...view details