ETV Bharat Karnataka

ಕರ್ನಾಟಕ

karnataka

ETV Bharat / city

ದಾವಣಗೆರೆ: ಓಮ್ನಿ ಕಾರುಗಳ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ - Accident between two omnies

ಅತಿ ವೇಗದ ಚಾಲನೆಯಿಂದ ಉಪನಾಯಕನಹಳ್ಳಿ ಬಳಿ ಎರಡು ಓಮ್ನಿಗಳು ಮುಖಾಮುಖಿ ಡಿಕ್ಕಿಯಾಗಿವೆ.

accident-between-two-omnis
ಎರಡು ಓಮ್ನಿಗಳ ನಡುವೆ ಮುಖಾಮುಖಿ ಡಿಕ್ಕಿ
author img

By

Published : Apr 15, 2022, 3:15 PM IST

ದಾವಣಗೆರೆ:ಎರಡು ಓಮ್ನಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ, ವಾಹನಗಳೆರಡೂ ನಜ್ಜುಗುಜ್ಜಾಗಿವೆ. ಹಲವರಿಗೆ ಗಂಭೀರ ಗಾಯಗಳಾಗಿವೆ.

ಚನ್ನಗಿರಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ನಡೆದ ದುರ್ಘಟನೆಯಲ್ಲಿ ಮೂರ್ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನಗಿರಿ ತಾಲೂಕಿನ ಅತ್ತಿಗೆರೆ ಗ್ರಾಮದಿಂದ ಅಮ್ಮನಗುಡ್ಡಕ್ಕೆ ಹೋಗುತ್ತಿದ್ದ ಓಮ್ನಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಡೂರು ಗ್ರಾಮದಿಂದ ಬರುತ್ತಿದ್ದ ಓಮ್ನಿ ಡಿಕ್ಕಿ ಹೊಡೆದಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಟ್ರಕ್​ ಹಿಂಬದಿಗೆ ಡಿಕ್ಕಿ ಹೊಡೆದ ಬೊಲೆರೋ.. ಕುಲದೇವಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ 6 ಜನ ಸಾವು!

ABOUT THE AUTHOR

author-img

...view details