ದಾವಣಗೆರೆ:ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಕಮಲ ಪಾಳಯದ ಕಾರ್ಯಕರ್ತರು ಗೃಹ ಸಚಿವ ಎಂ. ಬಿ. ಪಾಟೀಲ್ ವಿರುದ್ದ ಜಿಲ್ಲಾ ಬಿಜೆಪಿ ಘಟಕ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಗೃಹ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಬಿಜೆಪಿ ಪ್ರತಿಭಟನೆ - undefined
ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಗೃಹ ಸಚಿವ ಎಂ. ಬಿ. ಪಾಟೀಲ್ ಅಧಿಕಾರ ದುರ್ಬಳಕೆ ಮಾಡಿಕೊಂಡು ಸುಳ್ಳು ಕೇಸ್ ದಾಖಲಿಸುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು
ನಗರದ ಬಿಜೆಪಿ ಜಿಲ್ಲಾ ಕಚೇರಿ ಎದುರು ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಎಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗೆ
ಮನವಿ ಸಲ್ಲಿಸಿದರು.
ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಗೃಹ ಸಚಿವ ಎಂ. ಬಿ. ಪಾಟೀಲ್ ಅಧಿಕಾರ ದುರ್ಬಳಕೆ ಮಾಡಿಕೊಂಡು ಸುಳ್ಳು ಕೇಸ್ ದಾಖಲಿಸುವಂತೆ ಮಾಡುತ್ತಿದ್ದಾರೆ. ಮಾತ್ರವಲ್ಲ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಚಿವ ಸ್ಥಾನದಿಂದ ಪಾಟೀಲ್ರನ್ನು ಕೆಳಗಿಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.