ದಾವಣಗೆರೆ: ಸಿದ್ದರಾಮಯ್ಯ ಏನೇ ಆರೋಪ ಮಾಡಿದ್ರು ಗೆಲ್ಲಲ್ಲ, ಅವರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ನಗರದ ಜಿಎಂಐಟಿ ಗೆಸ್ಟ್ ಹೌಸ್ನಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತೆ. ಹಾನಗಲ್, ಸಿಂದಗಿಯಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ. ನಮ್ಮೆಲ್ಲ ನಾಯಕರು ಎರಡು ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರದಲ್ಲಿ ದೊಡ್ಡ ಸಭೆ ನಡೆದಿದೆ. ಸಂಪೂರ್ಣವಾಗಿ ಜನ ಮೋದಿಯವರ ಪಕ್ಷಕ್ಕೆ ಬೆಂಬಲಿಸಲು ತೀರ್ಮಾನಿಸಿದ್ದಾರೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.