ದಾವಣಗೆರೆ : ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ ಸಂಭವಿಸಿ 15 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊರ ವಲಯದಲ್ಲಿ ನಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ.
ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ಗಳು ನಜ್ಜುಗುಜ್ಜಾಗಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಅತಿ ವೇಗವಾಗಿ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.