ಕರ್ನಾಟಕ

karnataka

ETV Bharat / city

ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು: ದಾವಣಗೆರೆ ಡಿಸಿ ಸೂಚನೆ - ಗಣೇಶ ಮತ್ತು ಮೊಹರಂ ಹಬ್ಬಗಳ ಆಚರಣೆ

ಗಣೇಶ ಮತ್ತು ಮೊಹರಂ ಹಬ್ಬಗಳ ಆಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರಿಕರ ಸೌಹಾರ್ದ ಸಭೆಯ ಅಧ್ಯಕ್ಷೆತೆ ವಹಿಸಿ ಮಾತನಾಡಿದ ಅವರು, ಹಬ್ಬಗಳು ಆಡಂಬರದಿಂದ ಆಚರಿಸುವಂತಾಗಬಾರದು, ಭಕ್ತಿ ಪೂರಕವಾಗಿ ಇರಬೇಕು ಎಂದರು.

Celebrate festival Peace Friendly  Davangere DC
ಶಾಂತಿ-ಸೌಹಾರ್ದಯುತವಾಗಿ ಹಬ್ಬವನ್ನು ಆಚರಿಸಬೇಕು: ದಾವಣಗೆರೆ ಡಿಸಿ ಸೂಚನೆ

By

Published : Aug 20, 2020, 1:03 PM IST

ದಾವಣಗೆರೆ: ಗಣೇಶ ಹಾಗೂ ಮೊಹರಂ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶ ಮತ್ತು ಮೊಹರಂ ಹಬ್ಬಗಳ ಆಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರಿಕರ ಸೌಹಾರ್ದ ಸಭೆಯ ಅಧ್ಯಕ್ಷೆತೆ ವಹಿಸಿ ಮಾತನಾಡಿದ ಅವರು, ಹಬ್ಬಗಳು ಆಡಂಬರದಿಂದ ಆಚರಿಸುವಂತಾಗಬಾರದು. ಭಕ್ತಿಪೂರ್ವಕವಾಗಿ ಇರಬೇಕು ಎಂದರು.

ಎಸ್ಪಿ ಹನುಮಂತರಾಯ ಮಾತನಾಡಿ, ಶಾಂತಿ ಸೌಹಾರ್ದದ ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ನಮಗಿರುವ ಕಾನೂನಿನ ಪರಿಮಿತಿಯಲ್ಲಿ ಹಬ್ಬಗಳನ್ನು ಆಚರಣೆ ಮಾಡಬೇಕು. ಬೇರೆಯವರ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಬೇಕೆಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ 1442 ರೌಡಿಶೀಟರ್ ಇದ್ದಾರೆ. ಎಲ್ಲವೂ ಪರ್ಮನೆಂಟ್ ರೆಕಾರ್ಡ್​ ಅಲ್ಲ. ಜಿಲ್ಲೆಗೆ ಸಂಬಂಧಪಟ್ಟ ಕೆಟ್ಟ ಘಟನೆಗಳ ಹಿನ್ನೆಲೆಯಲ್ಲಿ ಜನರಿಗೆ ಶಾಂತಿ ಕಲ್ಪಿಸುವ ದಿಸೆಯಲ್ಲಿ ನಿಗಾ ಇಡಲಾಗಿದೆ. ವಯಸ್ಸಾದವರು, ಕೇಸ್ ಖುಲಾಸೆಯಾದವರು, ಊರು ಬಿಟ್ಟು ಹೋಗಿ ಬೇರೆ ಕಡೆ ನೆಲೆಸಿದವರು ಹಾಗೂ ಜೀವನದಲ್ಲಿ ಬದಲಾಗಿ ಬದುಕು ನಡೆಸುತ್ತಿರುವವರನ್ನು ಸದ್ಯದಲ್ಲಿಯೇ ರೌಡಿಶೀಟರ್​ನಿಂದ ತೆಗೆದು ಹಾಕುತ್ತೇವೆ ಎಂದು ತಿಳಿಸಿದರು.

ಗಣೇಶ ಹಬ್ಬದ ಷರತ್ತುಗಳು:

ಗಣೇಶ ಚತುರ್ಥಿ ಹಬ್ಬದಲ್ಲಿ ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯ ಜನರೊಂದಿಗೆ ಆಚರಿಸಬಹುದು. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.

ಪಾರಂಪರಿಕ ಗಣೇಶೋತ್ಸವಕ್ಕೆ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಹಾನಗರ ಪಾಲಿಕೆ, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಒಂದು ವಾರ್ಡಿಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೇ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಗಣೇಶ ಮೂರ್ತಿಯನ್ನು ತರುವಾಗ, ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆಗಳನ್ನು ಹೊರಡಿಸತಕ್ಕದಲ್ಲ ಎಂದು ಎಸ್ಪಿ ತಿಳಿಸಿದರು.

ABOUT THE AUTHOR

...view details