ದಾವಣಗೆರೆ :ಇದೇ ಫೆ.8 ಮತ್ತು 9ರಂದು ನಡೆಯುವ ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಯಡಿಯೂರಪ್ಪ ಮೀಸಲಾತಿ ಘೋಷಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಾಲ್ಮೀಕಿ ಪೀಠಧ್ಯಕ್ಷರಾದ ಪ್ರಸನ್ನಾನಂದ ಪುರಿ ಶ್ರೀ ಆಶಯ ವ್ಯಕ್ತಪಡಿಸಿದರು.
ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಮೀಸಲಾತಿ ಘೋಷಣೆ ಮಾಡ್ತಾರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಪಾದಯಾತ್ರೆ ಹಮ್ಮಿಕೊಂಡು ಸರ್ಕಾರಕ್ಕೆ ಆಗ್ರಹ ಮಾಡಿದ್ದೆವು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ರವರು ಕೂಡ ವರದಿಯನ್ನು ಸಲ್ಲಿಸಿದ್ದರಿಂದ ಆಯೋಗಕ್ಕೆ ಸರ್ಕಾರ ಸಬ್ ಕಮೀಟಿ ರಚನೆ ಮಾಡಿದೆ.
ಈ ಬಾರಿ ನಡೆಯುವ ವಾಲ್ಮೀಕಿ ಜಾತ್ರೆಯಲ್ಲಿ 7.5ರಷ್ಟು ಮೀಸಲಾತಿ ಹೆಚ್ಚಳ ಮಾಡುವ ವಿಶ್ವಾಸ ಹಾಗೂ ನಂಬಿಕೆ ಇದೆ ಎಂದು ಶ್ರೀಗಳು ತಿಳಿಸಿದರು.
ವಾಲ್ಮೀಕಿ ಜಾತ್ರೆಗೆ ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ :ವಾಲ್ಮೀಕಿ ಜಾತ್ರೆಗಾಗಿ ಈಗಾಗಲೇ ಮಠದಿಂದ ಹಾಗೂ ಜಿಲ್ಲಾಡಳಿತದಿಂದ ಭರದ ಸಿದ್ಧತೆ ನಡೆದಿದೆ. ಜಾತ್ರೆಯ ಪೂರ್ವಸಿದ್ಧತೆಯ ಕುರಿತು ಜಿಲ್ಲಾಡಳಿತ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ನೇತೃತ್ವದಲ್ಲಿ ನಡೆದಿದ್ದು, ಜಾತ್ರೆಯ ಸಿದ್ಧತೆ ಬಗ್ಗೆ ಸರ್ವ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಲಾಯಿತು.
ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ, ಟ್ರಾಫೀಕ್, ಹೆಲಿಕಾಪ್ಟರ್ ಲ್ಯಾಂಡಿಂಗ್, ಶೌಚಾಲಯ ಹಾಗೂ ಊಟದ ವ್ಯವಸ್ಥೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಶ್ರೀಗಳ ಸಮ್ಮುಖದಲ್ಲಿ ಎಲ್ಲಾ ಅಧಿಕಾರಿಗಳಿಗೆ ಒಂದೊಂದು ಜವಾಬ್ದಾರಿ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.