ದಾವಣಗೆರೆ: ಸಿಎಂ ಯಡಿಯೂರಪ್ಪ ವೇದಿಕೆ ಮೇಲಿದ್ದಾಗಲೇ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ನಡೆಯಿತು.
ಸಿಗರೇಟ್ ಸೇದಿ ಬೆಂಕಿ ನಂದಿಸದ ಪರಿಣಾಮ: ಸಿಎಂ ವೇದಿಕೆಯಲ್ಲಿದ್ದಾಗಲೇ ನಡೆದ ಅವಘಡ - ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ ವೇದಿಕೆ ಮೇಲಿದ್ದಾಗಲೇ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಕಂಡುಬಂತು.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ನಡೆಯುವಾಗ ವೇದಿಕೆ ಸಮೀಪದಲ್ಲೇ ಬೆಂಕಿ ಕಾಣಿಸಿಕೊಂಡಿತು. ನಂತರ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಕಿಡಿಗೇಡಿಗಳು ಬೀಡಿ, ಸಿಗರೇಟ್ ಸೇದಿ ಬಳಿಕ ಬೆಂಕಿ ನಂದಿಸದೇ ಎಸೆದಿದ್ದು, ಜಮೀನಿನಲ್ಲಿ ಮೆಕ್ಕೆಜೋಳದ ದಂಡಿಗೆ ಕಿಡಿ ತಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸೇವಾಲಾಲ್ ಜಯಂತಿಗೆ ಆಗಮಿಸಿದ್ದ ಭಕ್ತಾದಿಗಳಿಂದ ಕಿಡಿಗೇಡಿತನದ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ದನ ಕರುಗಳಿಗೆ ಮೀಸಲಿರಿಸಿದ್ದ ಅಲ್ಪ ಸ್ವಲ್ಪ ಮೇವು ಬೆಂಕಿಗಾಹುತಿಯಾಗಿದ್ದು, ಜಮೀನಿನ ಮಾಲೀಕರು ಹಿಡಿಶಾಪ ಹಾಕಿದ್ದಾರೆ.