ದಾವಣಗೆರೆ:ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಸ್ಪರ್ಧಾತ್ಮಕ ಬಹುದಿನದ ಕನಸು ನನಸಾಗಿದೆ. ಬೆಣ್ಣೆನಗರಿಗೆ ಮತ್ತೊಂದು ಹೆಸರಾದ ಶಿಕ್ಷಣ ನಗರಿಯಲ್ಲಿ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಶುರುವಾಗಿದ್ದು, ಉದ್ಯೋಗ ಆಕಾಂಕ್ಷಿಗಳಿಗೆ ಖುಷಿ ತಂದಿದೆ.
ದಾವಣಗೆರೆ ವಿವಿಯಲ್ಲಿ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಆರಂಭ: ಸ್ಪರ್ಧಾರ್ಥಿಗಳ ಸಂತಸ - ದಾವಣಗೆರೆಯಲ್ಲಿ ಸ್ಪರ್ಧಾತ್ಮಕ ತರಬೇತಿ ಕೇಂದ್ರ
ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಾಂಕೇತಿಕವಾಗಿ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಆರಂಭವಾಗಿದೆ.
ತೋಳಹುಣಸೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಜಿಲ್ಲಾಧಿಕಾರಿ ವೈಯುಕ್ತಿಕವಾಗಿ ₹ 3 ಲಕ್ಷ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ. ಸದ್ಯದ ಮಟ್ಟಿಗೆ ತರಬೇತಿಗೆ ಕಡಿಮೆ ಶುಲ್ಕ ನಿಗದಿಗೊಳಿಸಲಾಗಿದೆ ಎಂದು ಉಪಕುಲಪತಿ ಡಾ. ವಿಎಸ್ ಹಲಸೆ ಮಾಹಿತಿ ನೀಡಿದ್ದಾರೆ.
ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಗಳಿಗೆ ಆದ್ಯತೆ ನೀಡಲಾಗಿದ್ದು, ಅಂಕಗಳ ಆಧಾರದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಶೇ. 50ರಷ್ಟು ಸ್ಥಾನ ಮೀಸಲಿಡಲಾಗಿದೆ. ಪ್ರವೇಶ ಪರೀಕ್ಷೆ ಮೂಲಕ ಇದೇ 12ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ.