ದಾವಣಗೆರೆ: ವೆಂಟಿಲೇಟರ್ ಸಿಗದೇ ಮೃತಪಟ್ಟವರ ಕುಟುಂಬದವರಿಗೆ ಹತ್ತು ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಘಟಕ ನಗರದಲ್ಲಿಂದು ಪ್ರತಿಭಟನೆ ನಡೆಸಿತು.
ವೆಂಟಿಲೇಟರ್ ಸಿಗದೆ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರಕ್ಕೆ ಆಗ್ರಹ: ಕಾಂಗ್ರೆಸ್ ಪ್ರತಿಭಟನೆ - ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕೆಲ ಸಿಬ್ಬಂದಿ ಹಣ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ವೆಂಟಿಲೇಟರ್ ಸಿಗುತ್ತಿಲ್ಲ. ಇದರಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
![ವೆಂಟಿಲೇಟರ್ ಸಿಗದೆ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರಕ್ಕೆ ಆಗ್ರಹ: ಕಾಂಗ್ರೆಸ್ ಪ್ರತಿಭಟನೆ Congress demands protest compensation deceased without ventilator](https://etvbharatimages.akamaized.net/etvbharat/prod-images/768-512-8857357-1002-8857357-1600501627761.jpg)
ನಗರದ ಜಿಲ್ಲಾಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಕೊಡಿಸುತ್ತಿಲ್ಲ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ವೆಂಟಿಲೇಟರ್ ಸಿಗುತ್ತಿಲ್ಲ. ಇದರಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಎಂದು ಆರೋಪಿಸಿದರು.
ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ಆಗಬೇಕು. ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಮೃತದೇಹ ನೀಡಲು ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕೆಲ ಸಿಬ್ಬಂದಿ ಹಣ ಪಡೆಯುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಿದ್ದರೂ ಪ್ರಯೋಜನ ಆಗಿಲ್ಲ ಎಂದು ದೂರಿದರು.