ದಾವಣಗೆರೆ :ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಕೊನೆಗೂ ಜಿಲ್ಲೆಯಲ್ಲಿ ಕೊರೊನಾ ಟೆಸ್ಟಿಂಗ್ ಉಪಕರಣ ಬಂದಿದೆ.
ಕೊನೆಗೂ ದಾವಣಗೆರೆಗೆ ಬಂತು ಕೊರೊನಾ ಟೆಸ್ಟಿಂಗ್ ಲ್ಯಾಬ್.. - ಎಸ್. ಎಸ್. ಹೈಟೆಕ್ ಆಸ್ಪತ್ರೆ
ಕಳೆದ ಒಂದು ವಾರದಿಂದ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿವೆ. ಪರೀಕ್ಷಾ ವರದಿ ಬರುವುದು ತಡವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಗೆ ಟೆಸ್ಟಿಂಗ್ ಲ್ಯಾಬ್‌ಗೆ ಜಿಲ್ಲಾಡಳಿತ ಬೇಡಿಕೆ ಇಟ್ಟಿತ್ತು.
ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಆರಂಭಿಸಲಾದ ಪರೀಕ್ಷಾ ಪ್ರಯೋಗಾಲಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಉಪಸ್ಥಿತರಿದ್ದರು.
ಶಿವಮೊಗ್ಗ, ಪುಣೆಯ ಲ್ಯಾಬ್‌ನಲ್ಲಿ ಸೋಂಕಿತರ ಟೆಸ್ಟಿಂಗ್ ಮಾಡಿಸಲಾಗುತಿತ್ತು. ದಾವಣಗೆರೆಯಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿವೆ. ಪರೀಕ್ಷಾ ವರದಿ ಬರುವುದು ತಡವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಗೆ ಟೆಸ್ಟಿಂಗ್ ಲ್ಯಾಬ್‌ಗೆ ಜಿಲ್ಲಾಡಳಿತ ಬೇಡಿಕೆ ಇಟ್ಟಿತ್ತು. ಇಂದಿನಿಂದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ನಡೆಯಲಿದೆ. ಜಿಲ್ಲಾಸ್ಪತ್ರೆಯಲ್ಲಿ ಆದಷ್ಟು ಬೇಗ ಲ್ಯಾಬ್ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.