ದಾವಣಗೆರೆ:ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ವಿವಿಧ ಬ್ಯಾಂಕ್ಗಳ ನೌಕರರು ಮುಷ್ಕರ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ - ಎಟಿಎಂ ಗಳಲ್ಲೂ ಹಣದ ಸಮಸ್ಯೆ ಉಂಟಾಗಿದ್ದು
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ವಿವಿಧ ಬ್ಯಾಂಕ್ಗಳ ನೌಕರರು ಮುಷ್ಕರ ನಡೆಸಿದರು.
ಬ್ಯಾಂಕ್ ಕಾರ್ಯ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಲಾಗಿದೆ. ಎಸ್ಬಿಐ, ಕೆನರಾ ಬ್ಯಾಂಕ್, ಕರ್ನಾಟಕ ಬ್ಯಾಂಕ್ ಸೇರಿದಂತೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ಗಳ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. 2018ರಲ್ಲಿ ಕೇಂದ್ರ ಸರ್ಕಾಕ್ಕೆ ಬ್ಯಾಂಕ್ ನೌಕರರು ವೇತನ ಹೆಚ್ಚಳ ಹಾಗೂ ಪರಿಷ್ಕರಣೆ ಮಾಡಬೇಕೆಂದು ಒತ್ತಾಯ ಮಾಡಿದ್ದರು. 2020 ಬಂದರೂ ಕೇಂದ್ರ ಸರ್ಕಾರ ಬ್ಯಾಂಕ್ ನೌಕರರ ಮನವಿಗೆ ಸ್ಪಂದಿಸಿಲ್ಲ, ಪಿಂಚಣಿ ಪರಿಷ್ಕರಿಸಿಲ್ಲ. ಈ ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಇಂದಿನಿಂದ 2 ದಿನ ಮುಷ್ಕರ ಮಾಡಗುತ್ತಿದ್ದು, ಭಾನುವಾರ ಸರ್ಕಾರಿ ರಜೆ ಸೇರಿ 3 ದಿನ ಬ್ಯಾಂಕ್ ವಹಿವಾಟು ಸಂಪೂರ್ಣ ಸ್ಥಗಿತವಾಗಲಿದೆ.