ದಾವಣಗೆರೆ: ಮಹಾನಗರ ಪಾಲಿಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಜಿದ್ದಾಜಿದ್ದಿಗೆ ಕಾರಣವಾಗಿದ್ದ 28 ಹಾಗೂ 37ನೇ ವಾರ್ಡ್ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಶತಪ್ರಯತ್ನಪಟ್ಟು ಪ್ರಚಾರ ಮಾಡಿದ್ದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪ್ರಯತ್ನ ಕೈಗೂಡಲಿಲ್ಲ.
ಗಂಡ- ಹೆಂಡತಿಗೆ ಗೆಲುವು:ಜೆ.ಎನ್.ಶ್ರೀನಿವಾಸ್ ಹಾಗು ಪತ್ನಿ ಶ್ವೇತಾ ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದು ಉಪಚುನಾವಣೆ ನಡೆದಿದೆ. 28ನೇ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಜೆ.ಎನ್. ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹುಲ್ಲುಮನೆ ಗಣೇಶ್ ವಿರುದ್ಧ ಜಯಭೇರಿ ಸಾಧಿಸಿದ್ದಾರೆ. 37 ನೇ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಶ್ವೇತಾ ಶ್ರೀನಿವಾಸ್ ಕಾಂಗ್ರೆಸ್ ಅಭ್ಯರ್ಥಿ ರೇಖಾ ರಾಣಿ ವಿರುದ್ಧ ಭರ್ಜರಿ ಜಯಗಳಿಸಿದ್ದಾರೆ.