ಕರ್ನಾಟಕ

karnataka

ETV Bharat / city

ಖಾಲಿ ನಿವೇಶನ ಸ್ವಚ್ಛಗೊಳಿಸದಿದ್ದರೆ ದಂಡ: ದಾವಣಗೆರೆ ಪಾಲಿಕೆ ಆಯುಕ್ತರ ವಾರ್ನಿಂಗ್

ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿರುವ ಮಾಲೀಕರು ತಮ್ಮ ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛ ಮಾಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರತಿ ಚದರ ಅಡಿಗೆ ರೂ.10 ರಂತೆ ದಂಡ ವಿಧಿಸಿ ವಸೂಲಿ ಮಾಡಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.

By

Published : Dec 17, 2020, 5:42 PM IST

Davanagere municipality  commissioner  warned to  owners  for clean their empty site
ದಾವಣಗೆರೆ ಪಾಲಿಕೆ

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ ನಿವೇಶನಗಳಲ್ಲಿ ಘನ ತ್ಯಾಜ್ಯ ವಸ್ತುಗಳನ್ನು ಹಾಕುತ್ತಿರುವ ದೂರು ಕೇಳಿ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆ ನಿವೇಶನಗಳ ಮಾಲೀಕರಿಗೆ ಎಚ್ಚರಿಕೆ ನೀಡಿದೆ.

ಖಾಲಿ ಸೈಟ್​ಗಳಲ್ಲಿ ಕಸ ಹಾಕುತ್ತಿರುವ ಬಗ್ಗೆ ಸ್ಥಳೀಯರು ಪಾಲಿಕೆಗೆ ದೂರು ನೀಡಿದ್ದರು. ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿರುವ ಮಾಲೀಕರು ತಮ್ಮ ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛ ಮಾಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರತಿ ಚದರ ಅಡಿಗೆ ರೂ.10 ರಂತೆ ದಂಡ ವಿಧಿಸಿ ವಸೂಲಿ ಮಾಡಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.

ABOUT THE AUTHOR

...view details