ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 14 ರಿಂದ 21ರ ವರೆಗೆ ಕಂಪ್ಲೀಟ್ ಲಾಕ್ ಡೌನ್ ಮುಂದುವರೆಸಿ ಜಿಲ್ಲಾಡಳಿತ ಅದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅದೇಶ ಹೊರಡಿಸಿ ಮಾತನಾಡಿದ ಅವರು ಅಗತ್ಯ ವಸ್ತುಗಳ ಖರೀದಿಗಾಗಿ 14, 16, ಮತ್ತು 18 ರಂದು ಬೆಳಗ್ಗೆ 6 ರಿಂದ 12 ರ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.
ಜೂನ್ 21 ರವರೆಗೆ ದಾವಣಗೆರೆ ಲಾಕ್ಡೌನ್: ಡಿಸಿ ಆದೇಶ - unlock
ಕೋವಿಡ್ ಸೋಂಕು ನಿಯಂತ್ರಣಕ್ಕೆ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದ್ದು, ದಾವಣಗೆರೆ ಜಿಲ್ಲೆಯ 25 ಗ್ರಾಮಗಳಲ್ಲಿ 10ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಅಂತಹ ಗ್ರಾಮಗಳನ್ನ ಕಂಟೋನ್ಮೆಂಟ್ ಜೋನ್ ಎಂದು ಜಿಲ್ಲಾಡಳಿತ ಘೋಷಣೆ ಮಾಡಿದೆ.
ಉಳಿದ ದಿನ ಹಾಲು ಮೊಟ್ಟೆ ಮೆಡಿಕಲ್ಗೆ ಮಾತ್ರ ಸೀಮಿತವಾಗಿದೆ. ತರಕಾರಿ ಹಣ್ಣುಗಳನ್ನು ತಳ್ಳು ಗಾಡಿ ಮುಖಾಂತರ ಮನೆ ಮನೆಗೆ ಹೋಗಿ ಮಾರಾಟ ಮಾಡುವಂತೆ ತಿಳಿಸಲಾಗಿದ್ದು, ಕೃಷಿ ಚಟುವಟಿಕೆ, ನರೇಗಾ ಕಾಮಗಾರಿಗಳಿಗೆ ಅವಕಾಶ ನೀಡಲಾಗಿದೆ. ಅದೇಶವನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
25 ಗ್ರಾಮಗಳು ಕಂಟೋನ್ಮೆಂಟ್ ಜೋನ್ ಘೋಷಣೆ...!
ಕೋವಿಡ್ ಸೋಂಕು ನಿಯಂತ್ರಣಕ್ಕೆ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದ್ದು, ದಾವಣಗೆರೆ ಜಿಲ್ಲೆಯ 25 ಗ್ರಾಮಗಳಲ್ಲಿ 10ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಅಂತಹ ಗ್ರಾಮಗಳನ್ನ ಕಂಟೋನ್ಮೆಂಟ್ ಜೋನ್ ಎಂದು ಜಿಲ್ಲಾಡಳಿತ ಘೋಷಣೆ ಮಾಡಿದೆ. ಯಾರು ಕೂಡಾ ಅನಗತ್ಯವಾಗಿ ಹೊರಗಡೆ ಬರುವಂತಿಲ್ಲ, ಗಂಭೀರ ಸಮಸ್ಯೆಗಳಿದ್ದರೇ ಮಾತ್ರ ಅವಕಾಶ. ನಿತ್ಯ ನಾಲ್ಕು ಸಾವಿರಕ್ಕೂ ಹೆಚ್ಚು ಜನರ ಟೆಸ್ಟ್ ಮಾಡಲಾಗುವುದು. ಈಗಾಗಲೇ 3.69 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದ್ದು, ಉಳಿದವರಿಗೆ ಹಂತ ಹಂತ ವಾಗಿ ಲಸಿಕೆ ನೀಡಲಾಗುವುದು ಎಂದರು.
ಸೋಂಕು ಇರುವ ಹಳ್ಳಿಗಳಲ್ಲಿ ಕಠಿಣ ರೂಲ್ಸ್ ಜಾರಿ: ನೂತನ ಎಸ್ಪಿ ರಿಷ್ಯಂತ್ ಆದೇಶ
ಸೋಂಕು ಇರುವ ಹಳ್ಳಿಗಳಲ್ಲಿ ನೂತನ ಎಸ್ಪಿ ರಿಷ್ಯಂತ್ ಕಠಿಣ ನಿಯಮಗಳನ್ನು ಜಾರಿ ಮಾಡಿದ್ದಾರೆ. ಜಿಲ್ಲಾಡಳಿತ ಲಾಕ್ ಡೌನ್ ವಿಸ್ತರಣೆ ಮಾಡಿದ ಬೆನ್ನಲ್ಲೇ ಎಸ್ಪಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು ದಾವಣಗೆರೆ ಜಿಲ್ಲೆಯ 25 ಹಳ್ಳಿಗಳಲ್ಲಿ ಒಳಗೆ ಬರುವ ಹಾಗೂ ಗ್ರಾಮದಿಂದ ಹೊರಹೋಗುವ ರಸ್ತೆಗಳಲ್ಲಿ ಚೆಕ್ ಪೋಸ್ಟ್ ಮಾಡಿ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ 25 ಹಳ್ಳಿಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಗುರುತಿಸಲಾಗಿದ್ದರಿಂದ ಈ ಕ್ರಮಕ್ಕೆ ಬಂದಿದ್ದೇವೆ. ಸೋಂಕನ್ನು ತಡೆಗಟ್ಟಲು ಹಳ್ಳಿಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 26 ಚೆಕ್ ಪೋಸ್ಟ್ ಗಳು ನಿರ್ಮಾಣ ಮಾಡಲಾಗಿದೆ. ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡುತ್ತಿದ್ದು, ತಡವಾದರು ಪರವಾಗಿಲ್ಲ ಗ್ರಾಮಕ್ಕೆ ಬರುವ ಹಾಗು ಹೊರ ಹೋಗುವ ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಬೇಕೆಂದು ತಿಳಿಸಲಾಗಿದೆ.
ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಗ್ರಾಮಾಂತರ ಭಾಗದಲ್ಲಿ ಅನವಶ್ಯಕವಾಗಿ ಓಡಾಡುವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದಲ್ಲದೆ ಕೋವಿಡ್ ಆಸ್ಪತ್ರೆಗಳಲ್ಲಿ ರೋಗಿಯ ಸಂಬಂಧಿಕರು ಅನವಶ್ಯಕವಾಗಿ ಓಡಾಡುತ್ತಿದ್ದು, ಓಡಾಡಿದರೆ ಕ್ರಮಕ್ಕೆ ಸಿಬ್ಬಂದಿ ಮುಂದಾಗ್ತಾರೆ ಎಂದರು.