ದಾವಣಗೆರೆ:ಜಿಲ್ಲೆಯಲ್ಲಿ 4-5 ದಿನಗಳಿಂದ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗಿ ಕೆರೆ-ಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದು ರೈತರ ಸಂತೋಷಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ಬೆಳೆ ಹಾನಿ ಸಂಭವಿಸಿ ಅಪಾರ ನಷ್ಟವನ್ನುಂಟು ಮಾಡುತ್ತಿದೆ.
ಈ ಮಧ್ಯೆಯೇ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕ್ ಅಪ್ ಡ್ಯಾಂ ತಡೆಗೋಡೆ ಬಿರುಕು ಬಿಟ್ಟಿದ್ದು, ರೈತರಲ್ಲಿ ಆತಂಕ ದ್ವಿಗುಣಗೊಳಿಸಿದೆ. ಡ್ಯಾಂಗೆ ನೀರಿನ ಹರಿವು ಹೆಚ್ಚಾದ ಕಾರಣ ತಡೆಗೋಡೆ ಬಿರುಕು ಬಿಟ್ಟಿದೆ ಎನ್ನಲಾಗಿದೆ.