ದಾವಣಗೆರೆ: ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಾಲಭವನದಲ್ಲಿ ಅತ್ಯಾಚಾರ ಸಂತ್ರಸ್ತೆಯೊಬ್ಬಳ ಮಗುವಿಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅದ್ಧೂರಿಯಾಗಿ ನಾಮಕರಣ ಮಾಡಲಾಯಿತು.
ಅತ್ಯಾಚಾರ ಸಂತ್ರಸ್ತೆ ಮಗುವಿಗೆ ಅದ್ಧೂರಿಯಾಗಿ ನಾಮಕರಣ ಮಾಡಿದ ದಾವಣಗೆರೆ ಡಿಸಿ - ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನ್ಯೂಸ್
ದಾವಣಗೆರೆ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಾಲಭವನದಲ್ಲಿ ಅತ್ಯಾಚಾರ ಸಂತ್ರಸ್ತೆಯೊಬ್ಬಳ ಮಗುವಿಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅದ್ಧೂರಿಯಾಗಿ ನಾಮಕರಣ ಮಾಡಲಾಯಿತು.
![ಅತ್ಯಾಚಾರ ಸಂತ್ರಸ್ತೆ ಮಗುವಿಗೆ ಅದ್ಧೂರಿಯಾಗಿ ನಾಮಕರಣ ಮಾಡಿದ ದಾವಣಗೆರೆ ಡಿಸಿ District Collector Nomenclature to Rape victims child in davanagere](https://etvbharatimages.akamaized.net/etvbharat/prod-images/768-512-6227249-thumbnail-3x2-lek.jpg)
ಮೌಢ್ಯತೆ ಹಿನ್ನೆಲೆ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಹಾಗೂ ಆಕೆಯ ಮಗುವಿಗೆ ಊರಿನ ಜನ ಬಹಿಷ್ಕಾರ ಹಾಕಿದ್ದರು. ಗ್ರಾಮದ ಹೊರವಲಯದಲ್ಲಿ ಮಗುವಿನೊಂದಿಗೆ ಮಹಿಳೆ ವಾಸ ಮಾಡುತ್ತಿದ್ದಳು. ವಿಷಯ ತಿಳಿದ ಜಿಲ್ಲಾಧಿಕಾರಿ, ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರ ಮನವೊಲಿಸಲು ಪ್ರಯತ್ನಿಸಿದ್ದರು. ಅದು ವಿಫಲವಾದ ಹಿನ್ನೆಲೆ ನಂತರ ದಾವಣಗೆರೆಯ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಕಲ್ಪಿಸಿದ್ದರು. ಇದೀಗ ಆ ಮಗುವಿಗೆ ಜಿಲ್ಲಾಡಳಿತದ ನೇತೃತ್ವದಲ್ಲಿ ನಾಮಕರಣವನ್ನು ಆದ್ಧೂರಿಯಾಗಿ ಮಾಡಲಾಯಿತು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರೇ ಮಗುವಿಗೆ ಮೊದಲು ಹೆಸರನ್ನು ಕಿವಿಯಲ್ಲಿ ಹೇಳಿದರು. ಈ ವೇಳೆ ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು. ಜಿಲ್ಲಾಧಿಕಾರಿಯವರ ಈ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.