ಹರಿಹರ:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಆದೇಶದಂತೆ ಸ್ಥಾಪಿಸಲಿರುವ ಟ್ರಸ್ಟ್‌ನಲ್ಲಿ ರಾಜಕೀಯ ಪಕ್ಷಗಳ ನಾಯಕರನ್ನು ಹೊರತುಪಡಸಿ ಕೇವಲ ವಿಶ್ವ ಹಿಂದೂ ಪರಿಷತ್, ಆರ್‌ಎಸ್‌ಎಸ್ ಹಾಗೂ ಸಾಧು-ಸಂತರು ಮಾತ್ರ ಒಳಗೊಂಡಿರಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ನಗರದ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಅಯೋಧ್ಯೆ ಹೋರಾಟದ ಮಾದರಿಯಲ್ಲಿ ಕಾಶಿ ಹಾಗೂ ಮಥುರಾದಲ್ಲಿಯೂ ಮಂದಿರ ನಿರ್ಮಿಸಲೂ ಹೋರಾಟಕ್ಕೆ ರೂಪುರೇಷೆ ಸಿದ್ಧಗೊಳಿಸಬೇಕು ಎಂದು ಹೇಳಿದರು.