ದಾವಣಗೆರೆ: ಚನ್ನಗಿರಿ ತಾಲೂಕಿನ ಸೂಳೆಕೆರೆ ಗುಡ್ಡದಲ್ಲಿ ನಡೆದಿದ್ದ ಕೊಲೆ ಪ್ರಕರಣ ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತುಂಗಾಶ್ವಾನಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ದಾವಣಗೆರೆಯ ‘ಲೇಡಿ ಸಿಂಗಂ ತುಂಗಾ’ ಸನ್ಮಾನಿಸಿದ ಸಚಿವ! - 74ನೇ ಸ್ವಾತಂತ್ರ್ಯ ದಿನಾಚರಣೆ
ಕೊಲೆ, ದರೋಡೆ, ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಲೇಡಿ ಸಿಂಗಂ ಖ್ಯಾತಿಯ ತುಂಗಾ ಶ್ವಾನಕ್ಕೆ ಸನ್ಮಾನ ಮಾಡಲಾಯಿತು.
‘ಲೇಡಿಸಿಂಗಂ ತುಂಗಾ’ಗೆ ಸನ್ಮಾನ
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಐಜಿಪಿ ರವಿ ಸೇರಿದಂತೆ ಇತರೆ ಅಧಿಕಾರಿಗಳು ತುಂಗಾಳಿಗೆ ಹಾರ ಹಾಕಿ ಶಾಲು ಹೊದಿಸಿ ಸನ್ಮಾನಿಸಿದರು. ಈ ವೇಳೆ ಶ್ವಾನದ ಫೋಟೋ ಕ್ಲಿಕ್ಲಿಸಲು ಜನರು ನಾ ಮುಂದು, ತಾ ಮುಂದು ಎಂದು ಮುಗಿ ಬಿದ್ದರು. ಮತ್ತೆ ಕೆಲವರು ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು.
ಕೊಲೆ, ದರೋಡೆ, ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುವ ಮೂಲಕ ದಾವಣಗೆರೆಯ ಲೇಡಿ ಸಿಂಗಂ ಎಂದೇ ತುಂಗಾ ಖ್ಯಾತಿ ಪಡೆದಿದ್ದಾಳೆ.
Last Updated : Aug 15, 2020, 11:52 PM IST