ಆನೇಕಲ್: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ತನ್ನ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಜಗಳ... ಕೊಲೆಯಲ್ಲಿ ಅಂತ್ಯ - ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿ
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ತನ್ನ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ.
ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಡಬ್ಲ್ಯೂ. ಪಾಸ್ವಾನ್ ಮೃತ ಯುವಕ. ಎರಡು ದಿನದ ಹಿಂದೆ ಅದೇ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮುನಿನ್ ಮಿನ್ಜ್ ಮತ್ತು ಪಾಸ್ವಾನ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ಮುನಿನ್ ಮಿನ್ಜ್ ಸ್ನೇಹಿತ ಪಾಸ್ವಾನ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಇನ್ನು ಆರೋಪಿ ಅಸ್ಸೋಂ ಮೂಲದವಾನಾಗಿದ್ದು, ಕೊಲೆ ನಂತರ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಸೆರೆಗೆ ಬಲೆ ಬೀಸಿದ್ದಾರೆ.