ಹರಿಹರ: ರಾಮಮಂದಿರ ಸ್ಥಾಪನೆಗೆ ಸಂಬಂಧಿಸಿದಂತೆ ಯಶಸ್ಸು ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಏಕರೀತಿಯ ಜನಸಂಖ್ಯಾ ನಿಯಂತ್ರಣ ಕಾಯ್ದೆ ಜಾರಿಗೆ ತರಲು ರಾಷ್ಟ್ರವ್ಯಾಪಿ ಹೋರಾಟ ನಡೆಸುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ತೀರ್ಪಿನ ವಿರುದ್ಧ ಮುಸ್ಲಿಂ ಮಂಡಳಿ ಸಲ್ಲಿಸಲಿರುವ ಮೇಲ್ಮನವಿ ಅಸಿಂಧುವಾಗಲಿದೆ. ಮುಂದಿನ ವರ್ಷದೊಳಗೆ ಮಂದಿರ ನಿರ್ಮಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ಹರಿಹರದಲ್ಲಿ ಈದ್‌ಮಿಲಾದ್ ಹಬ್ಬದ ಪೂರ್ವದಲ್ಲಿ ನಡೆದ ಗಲಭೆಯ ಸಂಪೂರ್ಣ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವ ಜೊತೆಗೆ ಹಿಂದೂಪರ ಹೋರಾಟಗಾರನ ವಾಹನ ಸುಟ್ಟಿರುವ ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಪೊಲೀಸರನ್ನು ಒತ್ತಾಯಿಸಿದರು.
ಕರ ಸೇವಕರ ಮತ್ತು ರಾಮ ಭಕ್ತರ ಹೋರಾಟ, ತ್ಯಾಗದ ಫಲವಾಗಿ ರಾಮಮಂದಿರ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ. ಈ ಹಿನ್ನೆಲೆ ನಗರದಲ್ಲಿ ಹೋರಾಟದಲ್ಲಿ ಪಾಲ್ಗೊಂಡ ಕರ ಸೇವಕರಾದ ಕೃಷ್ಣಮೂರ್ತಿ ಶ್ರೇಷ್ಠಿ ಹಾಗೂ ಶಂಕರ್ ನಾಡಿಗೇರ್ ಅವರಿಗೆ ಗೌರವ ಸಲ್ಲಿಸಲಾಯಿತು.