ದಾವಣಗೆರೆ:ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬೆನ್ನಲ್ಲೇ ಇಡೀ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಮಗನನ್ನು ಕಳೆದುಕೊಂಡ ಹರ್ಷನ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಅದರೆ ಹರ್ಷನ ಕುಟುಂಬಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂಪಿ ರೇಣುಕಾಚಾರ್ಯ 5 ಲಕ್ಷ ರೂಪಾಯಿ ವೈಯಕ್ತಿಕ ಪರಿಹಾರ ಹಾಗು ಹೊನ್ನಾಳಿ ಬಿಜೆಪಿ ವತಿಯಿಂದ 1 ಲಕ್ಷ ರೂ ಘೋಷಣೆ ಮಾಡಿದ್ದಾರೆ.
ಹರ್ಷ ಕುಟುಂಬದ ಜೊತೆ ನಾವೀದ್ದೇವೆ ಎಂದು ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಣ ಘೋಷಣೆ ಮಾಡಿರುವ ಮಾಹಿತಿ ಹಂಚಿಕೊಂಡಿದ್ದಾರೆ.