ಕರ್ನಾಟಕ

karnataka

ETV Bharat / city

ದಾವಣಗೆರೆಯಲ್ಲಿ ವರುಣಾರ್ಭಟಕ್ಕೆ ಬೆಳೆಹಾನಿ..ಸಂಕಷ್ಟಕ್ಕೆ ಸಿಲುಕಿದ ರೈತರು

ಕಳೆದೆರಡು ರಾತ್ರಿ ಸುರಿಯುತ್ತಿರುವ ಮಳೆ ದಾವಣಗೆರೆ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ಅಡಕೆ ತೋಟ, ಮೆಕ್ಕೆಜೋಳ, ತರಕಾರಿ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತ ವಾಗಿದ್ದರಿಂದ ರೈತರು ಆತಂಕದಲ್ಲಿದ್ದಾರೆ.

ದಾವಣಗೆರೆಯಲ್ಲಿ ವರುಣಾರ್ಭಟಕ್ಕೆ ಬೆಳೆಹಾನಿ
ದಾವಣಗೆರೆಯಲ್ಲಿ ವರುಣಾರ್ಭಟಕ್ಕೆ ಬೆಳೆಹಾನಿ

By

Published : Oct 4, 2021, 4:34 PM IST

ದಾವಣಗೆರೆ: ಕಳೆದೆರಡು ರಾತ್ರಿ ಸುರಿಯುತ್ತಿರುವ ಮಳೆ ದಾವಣಗೆರೆ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮಳೆ ನೀರಿನಿಂದ ಜಮೀನುಗಳು ಸಂಪೂರ್ಣ ಜಲಾವೃತವಾಗಿವೆ.

ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ಅಡಕೆ ತೋಟ, ಮೆಕ್ಕೆಜೋಳ, ತರಕಾರಿ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತವಾಗಿದ್ದರಿಂದ ರೈತರು ಆತಂಕದಲ್ಲಿದ್ದಾರೆ. ಅಡಕೆ ಗಿಡಗಳ ಕಾಂಡ ಹಾಗೂ ತರಕಾರಿಗಳು ಕೂಡ ಕೊಳೆಯುವ ಪರಿಸ್ಥಿತಿ ನಿರ್ಮಾಣ ಆಗಿದೆ.

ಮಳೆ ಅವಾಂತರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ರಾತ್ರಿ ಸುರಿದ ಮಳೆಗೆ ಬೆಳೆ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿದ ರೈತರು ಈಗ ನಷ್ಟ ಅನುಭವಿಸುವಂತಾಗಿದೆ.

ಅಲ್ಲದೇ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಕೂಡ ಆಗಮಿಸಿದ್ದು, ರೈತರಿಗೆ ಪರಿಹಾರ ನೀಡಲು ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ.

ABOUT THE AUTHOR

...view details