ದಾವಣಗೆರೆ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ(rain in davanagere) ಅವಾಂತರವನ್ನೇ ಸೃಷ್ಟಿಸಿದೆ. ಜಿಲ್ಲೆಯ ಚನ್ನಗಿರಿ, ನಲ್ಲೂರಿನಿಂದ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತವಾಗಿದೆ.
ನಲ್ಲೂರಿನ ಕೆರೆ ತುಂಬಿ ಕೋಡಿ ಬಿದ್ದಿರುವ ಪರಿಣಾಮ ರಸ್ತೆ ಜಲಾವೃತವಾಗಿವೆ. ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಭಾಗದಲ್ಲಿ ಬೆಳೆದಿದ್ದ ಅಡಿಕೆ, ಮೆಕ್ಕೆಜೋಳ ಬೆಳೆ ಮಳೆಯಿಂದ ನೆಲಕಚ್ಚಿವೆ. ಅಡಿಕೆ ತೋಟಗಳು ಜಲಾವೃತವಾಗಿದ್ದು, ರೈತರು ಹೈರಾಣಾಗಿದ್ದಾರೆ.