ಕರ್ನಾಟಕ

karnataka

ETV Bharat / city

ಉಗ್ರರ ದಾಳಿ ಭೀತಿ ಹಿನ್ನೆಲೆ ಬೆಣ್ಣೆನಗರಿಯಲ್ಲಿಯೂ ಹೈ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಉಗ್ರರ ದಾಳಿ ಭೀತಿ ಹಿನ್ನೆಲೆ ದಾವಣಗೆರೆ ನಗರದ ಪ್ರಮುಖ ಸ್ಥಳಗಳು ಹಾಗೂ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.

ದಾವಣಗೆರೆಯಲ್ಲಿ ಹೈ ಅಲರ್ಟ್ ಘೋಷಣೆ

By

Published : Aug 18, 2019, 5:19 PM IST

ದಾವಣಗೆರೆ: ರಾಜ್ಯದಲ್ಲಿ ಉಗ್ರರ ದಾಳಿ ಭೀತಿ ಹಿನ್ನೆಲೆ ನಗರದ ಪ್ರಮುಖ ಸ್ಥಳಗಳು ಹಾಗೂ ಜಿಲ್ಲೆಯ ಕೆಲ ತಾಲೂಕು ಕೇಂದ್ರ ಮತ್ತು ಪಟ್ಟಣಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆಯಲ್ಲಿ ಹೈ ಅಲರ್ಟ್ ಘೋಷಣೆ..

ಭಯೋತ್ಪಾದಕ ದಾಳಿ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ ಆರು ಕಡೆ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ದಾವಣಗೆರೆ ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಶಾಪಿಂಗ್ ಮಾಲ್, ಜಿಲ್ಲಾಧಿಕಾರಿ ಕಚೇರಿ, ಪಿ ಬಿ ರಸ್ತೆಯಂತಹ ಪ್ರಮುಖ ರಸ್ತೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ನಗರದ ಪ್ರಮುಖ ಸ್ಥಳಗಳಲ್ಲಿ ಕಳೆದ ಎರಡು ದಿನಗಳಿಂದ ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದು, ಸಂಜೆ ವೇಳೆಯಲ್ಲಿ ಪೊಲೀಸರು ಶ್ವಾನದಳದೊಂದಿಗೆ ಬಂದು ರೈಲ್ವೆ ನಿಲ್ದಾಣ ಸೇರಿದಂತೆ ಕೆಲವೆಡೆ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನಮಂತರಾಯ ಅವರು ಸಹ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅನುಮಾನಸ್ಪದವಾಗಿ ಯಾರೇ ಕಂಡು ಬಂದರೆ ಅವರನ್ನು ವಿಚಾರಣೆ ನಡೆಸುವಂತೆ ಹಾಗೂ ಪೊಲೀಸ್ ಅಧಿಕಾರಿಗಳಿಗೂ ಕೂಡ ಎಚ್ಚರಿಕೆಯಿಂದ ಇರುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ABOUT THE AUTHOR

...view details