ಕರ್ನಾಟಕ

karnataka

ETV Bharat / city

ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ: ಓರ್ವ ಮಹಿಳೆ ಗಂಭೀರ ಗಾಯ - ದಾವಣಗೆರೆ ಸುದ್ದಿ

ಸಿಲಿಂಡರ್​ಗೆ ಕನೆಕ್ಷನ್ ಕೊಡುವ ವೇಳೆ ಗ್ಯಾಸ್ ಸೋರಿಕೆಯಾಗಿದ ಪರಿಣಾಮ ಮನೆ ಹೊತ್ತಿ ಉರಿದಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.

davangere
ಸಿಲಿಂಡರ್ ಸ್ಪೋಟಗೊಂಡು ಹೊತ್ತಿ ಉರಿದ ಮನೆ

By

Published : Aug 29, 2021, 9:19 AM IST

ದಾವಣಗೆರೆ:ಸಿಲಿಂಡರ್ ಸ್ಫೋಟಗೊಂಡು ಮನೆ ಹೊತ್ತಿ ಉರಿದಿರುವ ಘಟನೆ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಗೃಹಿಣಿ ವೀಣಾ ಎಂಬುವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ

ಸಿಲಿಂಡರ್​ಗೆ ಕನೆಕ್ಷನ್ ಕೊಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವೀಣಾ ಹಾಗೂ ಜೊತೆಯಲ್ಲಿದ್ದ ಇಬ್ಬರು ಮಕ್ಕಳು ತಕ್ಷಣ ಮನೆಯಿಂದ ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಚನ್ನಗಿರಿಯ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಇನ್ನು, ಸಿಲಿಂಡರ್ ಸ್ಫೋಟಗೊಂಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಬಾಂಬ್ ರೀತಿಯಲ್ಲಿ ಸ್ಫೋಟಗೊಂಡಿರುವುದು ಇಡೀ ಗ್ರಾಮವನ್ನೇ ಬೆಚ್ವಿಬೀಳಿಸಿದೆ. ಬೆಂಕಿಯಿಂದ ಅಕ್ಕಪಕ್ಕದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಗಾಯಾಳು ವೀಣಾರನ್ನು ಚನ್ನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details