ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಮಸ್ಕಿ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ನೀಡಿದ್ದು ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಮಸ್ಕಿ ಉಪಚುನಾವಣೆ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತೇನೆ; ಬಿ.ವೈ. ವಿಜಯೇಂದ್ರ - ಮಸ್ಕಿ ಉಪಚುನಾವಣೆ
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಸ್ಕಿ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ. ಉಪಚುನಾವಣೆಯಲ್ಲಿ ಆ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಬಿವೈ ವಿಜಯೇಂದ್ರ
ಹೊನ್ನಾಳಿ ತಾಲೂಕಿನಲ್ಲಿ ನಡೆದ ಶಾಸಕ ರೇಣುಕಾಚಾರ್ಯ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಸ್ಕಿ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ. ಉಪಚುನಾವಣೆಯಲ್ಲಿ ಆ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಸಚಿವ ಸಂಪುಟದ ಕೆಲ ಸಚಿವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರ ಸಿಎಂ ಯಡಿಯೂರಪ್ಪ ಅವರ ಗಮನಕ್ಕೂ ಬಂದಿದೆ. ಅಸಮಾಧಾನ ಸಹಜ, ಅಸಮಾಧಾನಿತ ಶಾಸಕರನ್ನು ಕರೆಸಿ ಸಮಾಧಾನ ಪಡಿಸಲಾಗುವುದು ಎಂದರು.