ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಬಿಆರ್ಟಿಎಸ್ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಉಪನಗರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹಲ್ಲೆ ನಡೆಸಿದ ಬಿಆರ್ಟಿಎಸ್ ಬಸ್ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿದರು.
ಬಿಆರ್ಟಿಎಸ್ ಚಾಲಕನನ್ನು ಬಂಧಿಸುವಂತೆ ಆಗ್ರಹ ನಿನ್ನೆ ನಗರದ ಕೋರ್ಟಲ್ ಸಾಯಿ ಮಂದಿರದ ಬಳಿ ಬಿಆರ್ಎಸ್ ಬಸ್ ಚಾಲಕ ಲೋಹಿತ್ ಗಾಮನಗಟ್ಟಿ ಎಂಬಾತನಿಗೆ ವಿನಾ ಕಾರಣ ಹಲ್ಲೆ ನಡೆಸಿದ್ದ. ಹಲ್ಲೆಗೊಳಗಾದ ಯುವಕನಿಗೆ ಹುಬ್ಬಳ್ಳಿ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಬಸ್ ಚಾಲಕನನ್ನು ಬಂಧಿಸುವಂತೆ ಉಪನಗರ ಠಾಣೆ ಎದುರು ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.