ಕರ್ನಾಟಕ

karnataka

ETV Bharat / city

ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ - ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ

ಸಚಿವ ಜೆ.ಸಿ.ಮಾಧುಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ

By

Published : Nov 21, 2019, 3:16 PM IST

ದಾವಣಗೆರೆ:ಹಾಲುಮತ ಸಮುದಾದಯದ ಶ್ರೀಗಳಿಗೆ ಅಗೌರವ ತೋರಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ

ನಗರದ ಕುರುಬರ ವಿದ್ಯಾವರ್ಧಕ ಸಂಘದ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ತಾಳ್ಮೆ ಕಳೆದುಕೊಂಡಿದ್ದು ಸರಿಯಲ್ಲ. ಶಾಂತಿ ಸಭೆಯಲ್ಲಿ ಶಾಂತಿಯುತವಾಗಿ ಎಲ್ಲರ ಅಭಿಪ್ರಾಯ ಪಡೆಯದೇ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಆದ್ದರಿಂದ ಈ‌ ಕೂಡಲೇ ಮಾಧುಸ್ವಾಮಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಉಪ ವಿಭಾಗಧಿಕಾರಿಗಳಿಗೆ ಮನವಿ ಸಲ್ಲಿಸಿದರು.

For All Latest Updates

ABOUT THE AUTHOR

...view details