ದಾವಣಗೆರೆ:ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಇದರಿಂದ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲಾಪುರ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಹೊನ್ನಾಳಿಯಲ್ಲಿ ಬೋನಿಗೆ ಬಿದ್ದ ಚಿರತೆ... ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - Forest department
ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
leopard-fell-down-into-cage
ಚೀಲಾಪುರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಜನರಿಗೆ ಆತಂಕ ಉಂಟುಮಾಡಿತ್ತು. ಹಸು, ಮೇಕೆ, ಆಡುಗಳನ್ನು ಬೇಟೆಯಾಡುತ್ತಿತ್ತು. ಚಿರತೆ ಉಪಟಳಕ್ಕೆ ಬೆಚ್ಚಿಬಿದ್ದಿದ್ದ ಜನ ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಇಂದು ಬೆಳಿಗ್ಗೆ ಚಿರತೆ ಸೆರೆಯಾಗಿದೆ. ಚಿರತೆ ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಸಾಗಿಸಲಾಗಿದೆ. ಇದನ್ನು ನೋಡಲು ಜನಸಾಗರವೇ ಹರಿದು ಬಂದಿತ್ತು.
Last Updated : Oct 6, 2019, 6:17 PM IST