ದಾವಣಗೆರೆ : ಪ್ರೇಮಿಗಳಿಬ್ಬರು ಕೆರೆಯಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದ ಕೂಗಳತೆಯಲ್ಲಿರುವ ಕೆರೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ನಿನ್ನೆ ಇಬ್ಬರು ಬೈಕ್ನಲ್ಲಿ ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಬಂದಿದ್ದು, ನಂತರ ಯುವಕ ಚರಣ್ ಬೆಂಗಳೂರಿನಲ್ಲಿ ಇರುವ ತಂದೆಗೆ ಮತ್ತು ಸ್ನೇಹಿತನಿಗೆ ಕರೆ ಮಾಡಿ ಇಬ್ಬರು ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ. ನಂತರ ಸಂಬಂಧಿಕರ ಮಾಹಿತಿ ಮೇರೆಗೆ ಪೊಲೀಸರು ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ ಯುವಕನ ಬೈಕ್ ಮತ್ತು ಇಬ್ಬರ ಚಪ್ಪಲಿ ಪತ್ತೆಯಾಗಿದೆ.