ದಾವಣಗೆರೆ: 70 ವರ್ಷದಿಂದ ಕಾಂಗ್ರೆಸ್ ಏನು? ಮಾಡಿದೆ. ಅವರು ಕನಿಷ್ಠ ಶೌಚಾಲಯ ಕಟ್ಟಿಸಿಕೊಡಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ, ಶಿವಮೊಗ್ಗ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಪರ ಮತ ಪ್ರಚಾರದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಕತ್ತಲಾದ ಮೇಲೆ ಶೌಚಾಲಯಕ್ಕೆ ಹೋಗುವ ಪರಿಸ್ಥಿತಿ ಇತ್ತು. ಬಯಲು ಶೌಚ ಮುಕ್ತ ಮಾಡಿದ್ದು ಬಿಜೆಪಿ ಸರ್ಕಾರ ಎಂದು ಹೇಳಿದರು.
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ವ್ಯಾಕ್ಸಿನ್ ಹಾಕಿಸಿಕೊಂಡರೆ ಗಂಡಸತನ ಹೋಗುತ್ತದೆ ಎಂದು ಹೇಳಿದ್ದರು, ಆದ್ರೆ ಜನ ಅವರ ಮಾತನ್ನು ಕೇಳದೇ ವ್ಯಾಕ್ಸಿನ್ ಹಾಕಿಸಿಕೊಂಡರು. ಕಾಂಗ್ರೆಸ್ ನಾಯಕರು ಕದ್ದು ಮುಚ್ಚಿ ವ್ಯಾಕ್ಸಿನ್ ಹಾಕಿಸಿಕೊಂಡರು. ಇಡೀ ಪ್ರಪಂಚದಲ್ಲಿ ಕೋವಿಡ್ ಪರಿಸ್ಥಿಯನ್ನು ನಿಭಾಯಿಸಿದ ದೇಶಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂದರು.
ಇದನ್ನೂ ಓದಿ:ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ