ದಾವಣಗೆರೆ: ಬೆಳೆದು ನಿಂತಿದ್ದ 70 ಕ್ಕೂ ಅಧಿಕ ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಪರಾರಿಯಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಆಸಗೋಡು ಗ್ರಾಮದಲ್ಲಿ ನಡೆದಿದೆ.
ಜಗಳೂರು ಬಡಪೀಡಿತ ತಾಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ನೀರಿಲ್ಲದೆ ಆ ಭಾಗದ ರೈತರು ಸದಾ ಆತಂಕದಲ್ಲೇ ಕಾಲ ಕಳೆಯುತ್ತಾರೆ. ಅಸಗೋಡು ಗ್ರಾಮದ ರೈತ ಸಿದ್ದೇಶ್ ಕಳೆದ ಏಳು ವರ್ಷಗಳ ಹಿಂದೆ ಅಡಿಕೆ ಗಿಡಗಳನ್ನು ಹಾಕಿದ್ದರು. ಮಳೆ ಇಲ್ಲದ ವೇಳೆ ಟ್ಯಾಂಕರ್ಗಳಲ್ಲಿ ನೀರು ಹಾಕಿ ಗಿಡಗಳನ್ನು ಉಳಿಸಿಕೊಂಡಿದ್ದರು. ಉತ್ತಮ ಲಾಭ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತನಿಗೆ ಇದೀಗ ಕೊಡಲಿಪೆಟ್ಟು ಬಿದ್ದಂತಾಗಿದೆ.