ದಾವಣಗೆರೆ: ತಮ್ಮ 59ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.
ಅಭಿನಂದನಾ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ರೇಣುಕಾಚಾರ್ಯ - ಹುಟ್ಟುಹಬ್ಬದ ಅಭಿನಂದನಾ ಕಾರ್ಯಕ್ರಮ
ತಮ್ಮ 59ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಒತ್ತಾಯದ ಮೇರೆಗೆ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಟಗರು ಚಿತ್ರದ ಟಗರು ಬಂತು ಟಗರು ಹಾಡಿಗೆ ಸಖತ್ ಸ್ಟೆಪ್ ಹಾಕಿದರು.
ಅಭಿನಂದನಾ ಕಾರ್ಯಕ್ರಮದಲ್ಲಿ ಎಂ.ಪಿ.ರೇಣುಕಾಚಾರ್ಯ ಸಖತ್ ಸ್ಟೆಪ್
ಜಿಲ್ಲೆಯ ಹೊನ್ನಾಳಿ ಪಟ್ಟಣದ ಅಗಳ ಮೈದಾನದಲ್ಲಿ ಸೋಮವಾರ ರೇಣುಕಾಚಾರ್ಯ ಹುಟ್ಟುಹಬ್ಬದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತ್ತು. ಸಂಜೆ ಅದೇ ಮೈದಾನಲ್ಲಿ ಅವರ ಅಭಿಮಾನಿಗಳು ಮನೋರಂಜನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಅಭಿಮಾನಿಗಳ ಒತ್ತಾಯದ ಮೇರೆಗೆ ರೇಣುಕಾಚಾರ್ಯ, ಟಗರು ಚಿತ್ರದ ಟಗರು ಬಂತು ಟಗರು ಹಾಡಿಗೆ ಹೆಜ್ಜೆ ಹಾಕಿದರು.
ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳ ಜತೆ ರೇಣುಕಾಚಾರ್ಯ ಸಖತ್ ಸ್ಟೆಪ್ ಹಾಕಿದ್ದು, ಜನರು ಚಪ್ಪಾಳೆ, ಶಿಳ್ಳೆ ಹೊಡೆದು ಪ್ರೋತ್ಸಾಹಿಸಿದರು.