ದಾವಣಗೆರೆ: ಈಗಾಗಲೇ ಸಚಿವ ಸಂಪುಟ ಪುನರ್ ರಚನೆ ಮಾಡುವ ಸುಳಿವು ಬಿಜೆಪಿ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಅದರಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ಸಾಲಿನಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಕೂಡ ಇದ್ದಾರಂತೆ.
ನಗರದ ಮೋತಿ ವೀರಪ್ಪ ಕಾಲೇಜಿನ ಆವರಣದಲ್ಲಿ ಮಕ್ಕಳಿಗೆ ವ್ಯಾಕ್ಸಿನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡಿದರೆ ನನಗೆ ಕೊಡಬೇಕು. ಮತ್ಯಾರಿಗೆ ಕೊಡಲು ಬರುತ್ತದೆ ಎಂದು (ಮಾಧ್ಯಮದವರನ್ನು) ಪ್ರಶ್ನಿಸಿದರು.
ನಾನು ಇಲ್ಲಿ ಮಕ್ಕಳಿಗೆ ವ್ಯಾಕ್ಸಿನೇಷನ್ ಮಾಡಿಸಲು ಬಂದಿದ್ದೇನೆ. ನನಗೆ ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ. ನನಗೆ ಸಚಿವ ಸ್ಥಾನ ಸಿಗದೇ ಇರುವಾಗಲೂ ನಾನು ಸಂತೋಷವಾಗಿರುತ್ತೇನೆ ಎಂದರು.