ಕರ್ನಾಟಕ

karnataka

ETV Bharat / city

ಆರತಿ ಕಾರ್ಯಕ್ರಮದಲ್ಲಿ ಆಹಾರ ಸೇವಿ 50ಕ್ಕೂ ಅಧಿಕ ಮಂದಿ ಅಸ್ವಸ್ಥ! - ದಾವಣಗೆರೆ ಜಿಲ್ಲಾ ಸುದ್ದಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾಚನಾಯಕನಹಳ್ಳಿಯಲ್ಲಿ ಆರತಿ ಕಾರ್ಯಕ್ರಮದಲ್ಲಿ ನೀಡಿದ ಆಹಾರ ಸೇವಿಸಿ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಇವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

More then 50 people suffering from Food Poison in manchanayakanahalli, davanagere district
ಆರತಿ ಕಾರ್ಯಕ್ರಮದಲ್ಲಿ ಆಹಾರ ಸೇವಿ 50ಕ್ಕೂ ಅಧಿಕ ಮಂದಿ ಅಸ್ವಸ್ಥ!

By

Published : Dec 18, 2020, 1:21 AM IST

ದಾವಣಗೆರೆ:ಆರತಿ ಕಾರ್ಯಕ್ರಮವೊಂದರಲ್ಲಿ ಸಿದ್ಧಪಡಿಸಿದ ಆಹಾರ ಸೇವಿಸಿ 50 ಕ್ಕೂ ಹೆಚ್ಚು ಜನರು ಆಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾಚನಾಯಕನಹಳ್ಳಿಯಲ್ಲಿ ನಡೆದಿದೆ.

ಮಾಚನಾಯಕನ ಹಳ್ಳಿ ನಿವಾಸಿ ಅಂಜಿನಪ್ಪ ಎನ್ನುವರ ಮನೆಯಲ್ಲಿ ನಡೆದ ಆರತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜನ್ರು ಅಲ್ಲೇ ಸಿದ್ಧಪಡಿಸಿದ ಆಹಾರವನ್ನು ಸೇವಿಸಿದ್ದರು. ಬಳಿಕ 50 ಕ್ಕೂ ಹೆಚ್ಚು ಜನರಿಗೆ ಮೊದಲು ಹೊಟ್ಟೆ ನೋವು ಕಾರಣಿಸಿಕೊಂಡು ಕೆಲವೇ ನಿಮಿಷಗಳಲ್ಲಿ ವಾಂತಿಯಾಗಿದೆ. ಆಹಾರ ಸೇವಿಸಿ ಅಸ್ವಸ್ಥರಾದವರನ್ನು ಕೂಡಲೇ ಚನ್ನಗಿರಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ‌ ನೀಡಲಾಗುತ್ತಿದೆ.

ಆರತಿ ಕಾರ್ಯಕ್ರಮದಲ್ಲಿ ಆಹಾರ ಸೇವಿ 50ಕ್ಕೂ ಅಧಿಕ ಮಂದಿ ಅಸ್ವಸ್ಥ!

ಇನ್ನು, ಆಹಾರ ಸೇವಿಸಿ ಅಸ್ವಸ್ಥರಾಗಿದ್ದ ಜನರ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮಾಹಿತಿ ಆಧಾರಿಸಿ ಚನ್ನಗಿರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸಿದ್ಧಪಡಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details