ದಾವಣಗೆರೆ :ಹತಾಶರಾಗಿ ಯಾರೋ ಕಟ್ಟಿದ ಹುತ್ತದಲ್ಲಿ ಸೇರಿಕೊಂಡು ಶ್ರೀಮಂತಿಕೆ, ಅಹಂಕಾರದಿಂದ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿರುದ್ಧ ಸಂಸದ ಜಿ.ಎಂ ಸಿದ್ದೇಶ್ವರ್ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 20:20 ಕಮಿಷನ್ ಪಡೆಯುತ್ತಿದ್ದಾರೆ ಎಂಬ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆರೋಪಕ್ಕೆ ತಿರುಗೇಟು ನೀಡಿದರು.
ನಮ್ಮ ಜಿಲ್ಲೆಯಲ್ಲಿ ಯಾರು ಕೂಡ ಕಮಿಷನ್ ತೆಗೆದುಕೊಂಡಿಲ್ಲ. ಅವರು ತೆಗೆದುಕೊಂಡಿದ್ದಾರೆ, ಅದಕ್ಕೆ ಹೇಳುತ್ತಿದ್ದಾರೆ. ಅವರನ್ನು ಮೂರು ಬಾರಿ ಲೋಕಸಭೆ, ವಿಧಾನಸಭೆಯಲ್ಲಿ ಸೋಲಿಸಿದ್ದೇವೆ. ಅದಕ್ಕೆ ಈ ರೀತಿ ಮಾತನಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಅವರಿಗೆ ಕುಂದುವಾಡ ಕೆರೆ ನೆನಪಾಗಿದೆ. ಸೋತಾಗಿನಿಂದ ಹೊರಗೆ ಬಂದಿಲ್ಲ, ಈಗ ಮಾತನಾಡುತ್ತಾರೆ ಎಂದು ದೂರಿದರು.