ದಾವಣಗೆರೆ:ಬಿ ಎಸ್ ಯಡಿಯೂರಪ್ಪನವರು ಮತ್ತೊಮ್ಮೆ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡ್ಬೇಕು. ಅದ್ರೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಚುನಾವಣೆ ಸ್ಪರ್ಧೆ ಬಗ್ಗೆ ನಾನು ವಿರೋಧ ಮಾಡಲ್ಲ ಎಂದು ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ರಾಜಕೀಯ ಗುರುವಿನ ತ್ಯಾಗ ನೆನೆದು ಗದ್ಗದಿತರಾದರು.
ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಕೂರಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. ಅದಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಸಹ ಹೇಳಿದ್ದಾರೆ. ಎಲ್ಲ ವರ್ಗದ ಜನರು ಯಡಿಯೂರಪ್ಪನವರಿಗೆ ಬೆಂಬಲ ನೀಡಿದ್ದಾರೆ. ಬಿಎಸ್ವೈ ಇನ್ನೊಂದು ಬಾರಿ ಶಾಸಕರಾಗಬೇಕೆಂಬುವುದು ಎಲ್ಲ ಶಾಸಕರು ಇಂಗಿತ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ ಚುನಾವಣೆ ಸ್ಪರ್ಧೆ ಬಗ್ಗೆ ರಾಜ್ಯ ನಾಯಕರು, ಕೇಂದ್ರದ ವರಿಷ್ಠರು ತೀರ್ಮಾನ ಮಾಡ್ತರೆ ಎಂದರು.
ರಾಜಕೀಯ ಗುರುವಿನ ತ್ಯಾಗಕ್ಕೆ ಕಣ್ಣೀರು ಹಾಕಿದ ಶಾಸಕ ರೇಣುಕಾಚಾರ್ಯ ಯಡಿಯೂರಪ್ಪನವರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ರಾಜ್ಯದಲ್ಲಿ ಪ್ರವಾಸ ಮಾಡಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ. ಯಡಿಯೂರಪ್ಪನವರು ನೂರಾರು ಹೋರಾಟ ಮಾಡಿ, ಕೇಸ್ಗಳನ್ನು ಹಾಕಿಸಿಕೊಂಡ ನಾಯಕ ಎಂದು ಬಿಎಸ್ವೈ ಅವರನ್ನು ಕೊಂಡಾಡುತ್ತಲೇ ಭಾವುಕರಾಗಿ ಕಣ್ಣೀರು ಹಾಕಿದರು.
ಇದೇ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ ಅವರು, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಹಗಲುಗನಸು ಕಾಣುತ್ತಿದ್ದಾರೆ. ಇದು ನೂರಕ್ಕೆ ನೂರು ಸಾಧ್ಯವಿಲ್ಲ. ಇವರ ಕಚ್ಚಾಟವನ್ನು ಜನ ನೋಡುತ್ತಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಅಪರೂಪಕ್ಕೆ ಸತ್ಯ ಹೇಳಿದ್ದಾರೆ ಎಂದರು.
ಇದನ್ನೂ ಓದಿ:ಕಾಂಗ್ರೆಸ್ ಅಧಿಕಾರಕ್ಕೆ ತರಲು ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಡಿಕೆಶಿ ಖಡಕ್ ಸಂದೇಶ