ಕರ್ನಾಟಕ

karnataka

ETV Bharat / city

ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ದಾವಣಗೆರೆ ಜಿಲ್ಲಾಡಳಿತದಿಂದ ಹೊಸ ಪ್ಲಾನ್

ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎನ್ನುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹೊಸ ಪ್ಲಾನ್ ಹಾಕಿಕೊಂಡಿವೆ. ಪರೀಕ್ಷಾ ಕೇಂದ್ರಗಳಲ್ಲಿ ಇಎನ್​ಟಿ ತಜ್ಞರನ್ನು ಬಳಸಿ ಅಭ್ಯರ್ಥಿಗಳನ್ನು ತಪಾಸಣೆ ನಡೆಸಲು ಸಿದ್ಧತೆ ನಡೆಸುತ್ತಿದೆ.

plan to  control exam scams
ಪರೀಕ್ಷೆಗಳಲ್ಲಿ ಅಕ್ರಮ ನಡೆಯದಂತೆ ಕ್ರಮ

By

Published : May 15, 2022, 3:37 PM IST

ದಾವಣಗೆರೆ: ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವುದು ರಾಜ್ಯದಲ್ಲಿ ಭಾರಿ​ ಸದ್ದು ಮಾಡಿದೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎನ್ನುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹೊಸ ಯೋಜನೆ ಹಾಕಿಕೊಂಡಿವೆ.

ಇದೇ ಮೇ 21, 22ಕ್ಕೆ ಶಿಕ್ಷಕರ ನೇಮಕಾತಿ ಪರೀಕ್ಷೆ ಇದ್ದು, ದಾವಣಗೆರೆಯಲ್ಲಿ ಮೂರು ಕೇಂದ್ರಗಳಲ್ಲಿ 600 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ ಇಎನ್​ಟಿ ತಜ್ಞರನ್ನು ಬಳಸಿ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿ ಕೇಂದ್ರಕ್ಕೆ ಕಳುಹಿಸುವ ಕೆಲಸ ಮಾಡಲಾತ್ತದೆ. ಹೈಟೆಕ್ ನಕಲು ತಂತ್ರಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಈ ಕ್ರಮ ಕೈಗೊಂಡಿದ್ದಾರೆ.

ಪರೀಕ್ಷೆಗಳಲ್ಲಿ ಅಕ್ರಮ ನಡೆಯದಂತೆ ಕ್ರಮ

ಪಾದರಕ್ಷೆಗಳನ್ನು ಕಳಚಿ ಹೋಗುವಂತೆ ಸೂಚನೆ ನೀಡಲಾಗಿದೆ‌. ಅಯಾ ಪರೀಕ್ಷಾ ತರಬೇತಿ ಕೇಂದ್ರಗಳ ಹತ್ತಿರ ಇರುವ ಲಾಡ್ಜ್​​ಗಳ ಮೇಲೂ ಕೂಡ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ. ಯಾವುದೇ ರೀತಿ ಅಕ್ರಮ ನಡೆಯಬಾರದು, ಪಾರದರ್ಶಕತೆಯಿಂದ ಪರೀಕ್ಷೆ ನಡೆದು, ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಕೆಲಸ ಸಿಗಬೇಕು ಎನ್ನುವ ದೃಷ್ಟಿಯಿಂದ ಈ ರೀತಿಯ ಕ್ರಮ ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.‌

ಇದನ್ನೂ ಓದಿ:ಚಾಮರಾಜನಗರ : ಜಾತ್ರೆಯಲ್ಲಿ ರಥಕ್ಕೆ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ದಾವಣಗೆರೆಯಲ್ಲಿ ಕಳೆದ 2017ರಲ್ಲಿ ಕೆಪಿಎಸ್ಸಿ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ನಕಲು ಮಾಡಿ ಮೂವರು ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದರು. ಪ್ರಕರಣದಲ್ಲಿ 21 ಜನರು ಭಾಗಿಯಾಗಿರುವ ಬಗ್ಗೆ, ತನಿಖೆ‌ ನಂತರ ಬೆಳಕಿಗೆ ಬಂದಿತ್ತು. ಈ ಬಾರಿ ಜಿಲ್ಲಾಡಳಿತ ನೇಮಕಾತಿ ಪರೀಕ್ಷೆಗಳಲ್ಲಿ ಈ ರೀತಿಯ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಸಾಮಾಜಿಕ ಕಾರ್ಯಕರ್ತರು 'ಈಟಿವಿ ಭಾರತ'ದೊಂದಿಗೆ ಮಾತನಾಡಿದ್ದಾರೆ.

ABOUT THE AUTHOR

...view details